ವಾರ್ತಾಭಾರತಿ
548k Followersಮನೋಹರ್ ನಾಯಕ್ - ಆರೋಪಿ ಮುಖ್ಯ ಶಿಕ್ಷಕ
ಮಡಿಕೇರಿ ಡಿ.12 : ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಎಂಬಾತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ.
ಈ ಹಿನ್ನೆಲೆ ಮನೋಹರ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕ್‍ನನ್ನು ಅಮಾನತುಗೊಳಿಸಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Varthabharathi