Friday, 05 Mar, 4.59 pm ವಾರ್ತಾಭಾರತಿ

ಕರಾವಳಿ
ಮಂಗಳೂರು: ಮಾ.7ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ‌ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಮಾ. 7ರಂದು ಬೆಳಗ್ಗೆ 9ರಿಂದ ಮಂಗಳೂರಿನ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ .ಸಿ, ‌ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಡಾ.ಸಂತೋಷ್ ಕುಮಾರ್, ಡಿಸಿಪಿ ಹರಿರಾಮ್ ಶಂಕರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ. ಕೆ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸಲಿದ್ದಾರೆ.

ಅಪರಾಹ್ನ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಬಹುಮಾನ ವಿತರಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ .ವೈ, ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ , ಮಂಗಳೂರು ತಹಶೀಲ್ದಾರ್ ಟಿ.ಜಿ.ಗುರುಪ್ರಸಾದ್ , ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಮಾಹಾ ಪ್ರಬಂಧಕರಾದ ಯೋಗೀಶ್ ಆಚಾರ್ಯ ಭಾಗವಹಿಸಲಿರುವರು ಎಂದು ಇಬ್ರಾಹಿಂ ಅಡ್ಕಸ್ಥಳ ಪ್ರಧಾನ ಕಾರ್ಯದರ್ಶಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Varthabharathi
Top