ನಿಟ್ಟೆ, ಎ.3: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಪೂಜಾರಿ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಸುರತ್ಕಲ್‌ನ ಕರ್ನಾಟಕ ನೇಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿಕೆ) ಡಾಕ್ಟರೇಟ್ ಪದವಿ ಘೋಷಿಸಿದೆ.
ಎನ್‌ಐಟಿಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ಮೋಹನ್ ಪೂಜಾರಿ ತಮ್ಮ ಸಂಶೋಧನೆಯನ್ನು ಪೂರ್ಣಗೊಳಿಸಿದ್ದರು.

