Dailyhunt

ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ Aug 29, 2021

ಬೆಂಗಳೂರು, ಆ. 29: `ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಕರ್ನಾಟಕ ಸರಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಕಾನ್‍ಸ್ಟೇಬಲ್ (ಪಿಸಿ) ಹುದ್ದೆಗಳ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ತರಬೇತಿ ಸೇರ ಬಯಸುವವರು ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದ ಪದವೀಧರರಾಗಿರಬೇಕು.

ಆಸಕ್ತರು ಸೆ.4ರ ಒಳಗಾಗಿ ಪ್ರತಿದಿನ ಸಂಜೆ 5ಃ30 ರಿಂದ 7ಃ30ರ ವರೆಗೆ ಮೈಸೂರಿನ ಲಕ್ಷ್ಮೀಪುರಂ ಸರಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ (94481 17455) ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಸಿ.ಕೆ.ಕಿರಣ್ ಕೌಶಿಕ್(99728 30857) ಸಂಪರ್ಕಿಸಲು ಕೋರಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi