Dailyhunt
ಪ್ರಧಾನಿ ನಿರ್ದೇಶನ ಅನುಸರಿಸಿ ಇನ್ನಷ್ಟು ಕಠಿಣ ಕ್ರಮದ ಬಗ್ಗೆ ತೀರ್ಮಾನ: ಯಡಿಯೂರಪ್ಪ

ಪ್ರಧಾನಿ ನಿರ್ದೇಶನ ಅನುಸರಿಸಿ ಇನ್ನಷ್ಟು ಕಠಿಣ ಕ್ರಮದ ಬಗ್ಗೆ ತೀರ್ಮಾನ: ಯಡಿಯೂರಪ್ಪ

ಬೆಂಗಳೂರು, ಮೇ 5: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ ಇಂದು(ಮೇ 5) ಸಂಜೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕ್ಯಾಸಂಬಳ್ಳಿ ಚೆಂಗಲರಾಯರೆಡ್ಡಿ (ಕೆಸಿ ರೆಡ್ಡಿ)ಯವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಬಳಿ ಇರುವ ಅವರ ಪ್ರತಿಮೆ ಮುಂಭಾಗದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಬಿಗಿ ನಿಲುವು ಹೊರತಾಗಿಯೂ ಕೋವಿಡ್ ನಿಯಂತ್ರಣಕ್ಕೆ ಬಾರದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆಯಂತೆ ಇಂದು ಪ್ರಧಾನಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ.

ಬಳಿಕ ಸಂಜೆ ಅವರು ನೀಡುವ ಸೂಚನೆ, ನಿರ್ದೇಶನಕ್ಕಾಗಿ ಕಾಯ್ತ ಇದ್ದೇವೆ. ಪ್ರಧಾನಿ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಆಧರಿಸಿ ರಾಜ್ಯದಲ್ಲೂ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi