Dailyhunt
ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಗಂಗೊಳ್ಳಿ, ಎ.20: ಅನಾರೋಗ್ಯದಿಂದ ಬಳಲುತ್ತಿದ್ದ ಹಕ್ಲಾಡಿ ಗ್ರಾಮದ ಚಂದ್ರ ಮೊಗವೀರ(48) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಎ.19ರಂದು ರಾತ್ರಿ ಮನೆಯ ಅಂಗಳದಲ್ಲಿರುವ ಬಾವಿಗೆ ಅಳವಡಿಸಿದ ಕಬ್ಬಿಣದ ಪೈಪ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜೆಕಾರು: ಮರ್ಣೆ ಗ್ರಾಮದ ಕುಂಟಿನಿ ಮನೆ ಎಂಬಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬೆಳ್ತಂಗಡಿ ಮೂಲದ ಆನಂದ ಸೆರ್ವೆಗಾರ್(65) ಎಂಬವರು ವಿಪರೀತ ಮದ್ಯಪಾನ ಮಾಡುವ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಎ.19ರಂದು ರಾತ್ರಿ ಮನೆಯ ಮುಂಭಾಗದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi