ಉಡುಪಿ, ಎ.3: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿ ರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 30ರ ಒಳಗೆ ತಲುಪಿಸಬಹುದಾಗಿದೆ.
ಇ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತರು ಸಾಹಿತ್ಯ ಅಕಾಡೆಮಿ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

