Dailyhunt Logo
  • Light mode
    Follow system
    Dark mode
    • Play Story
    • App Story
ರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಬಹುತೇಕ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ಸಚಿವ ಸ್ಥಾನ ಸಿಗಲಿಲ್ಲವೆಂದು ಅಸಮಾಧಾನಗೊಂಡು ಇಂಡಿ‌ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಆದರೆ, ಇದೀಗ ತಮ್ಮ ರಾಜೀನಾಮೆಯನ್ನು ಯಶವಂತರಾಯಗೌಡ ಪಾಟೀಲ್‌ ಬುಧವಾರ(ಆ.5) ಹಿಂಪಡೆದಿದ್ದಾರೆ.

ನಿರ್ಧಾರವನ್ನು ಬದಲಿಸಿಕೊಂಡ ಯಶವಂತರಾಯಗೌಡ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಆಗಸ್ಟ್‌ 3ರಂದು ಸಲ್ಲಿಸಿದ್ದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

"ಆ 3ರಂದು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರಿಗೆ ನೀಡಿದ್ದೆ. ಆದರೆ ರಾಜೀನಾಮೆ ಪತ್ರವನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂಬ ಮಾಹಿತಿಯನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ" ಎಂದು ವಿಧಾನಸಭಾ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi