ಬೆಂಗಳೂರು, ಸೆ.23: ರಾಜ್ಯದಲ್ಲಿ ಗುರುವಾರ 836 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 15 ಜನರು ಸೋಂಕಿಗೆ ಬಲಿಯಾಗಿದ್ದು, 852 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,71,044ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,683ಕ್ಕೆ ತಲುಪಿದೆ.
15 ಸೋಂಕಿತರು ಬಲಿ: ಬಾಗಲಕೋಟೆ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 7, ದಕ್ಷಿಣ ಕನ್ನಡ 3, ಧಾರವಾಡ 1, ಮೈಸೂರು 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 836 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 310, ಬೀದರ್ 3, ಚಾಮರಾಜನಗರ 5, ಚಿಕ್ಕಮಗಳೂರು 26, ಚಿತ್ರದುರ್ಗ 2, ದಕ್ಷಿಣ ಕನ್ನಡ 106, ದಾವಣಗೆರೆ 2, ಧಾರವಾಡ 3, ಹಾಸನ 47, ಕಲಬುರಗಿ 5, ಕೊಡಗು 37, ಕೋಲಾರ 15, ಮಂಡ್ಯ 18, ಮೈಸೂರು 78, ರಾಮನಗರ 3, ಶಿವಮೊಗ್ಗ 22, ತುಮಕೂರು 25, ಉಡುಪಿ 69, ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 310 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ಗುರುವಾರದಂದು 310 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,44,674 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,117 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,21,117 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

