ಈ ವಾರದಲ್ಲಿ ಚಿನ್ನದ ಬೆಲೆಗಳು ಅಮೆರಿಕ-ಇರಾನ್ ನಡುವಿನ ಮಾತುಕತೆಗಳ ಬೆಳವಣಿಗೆಗಳು, ಕಚ್ಚಾ ತೈಲ ಮಾರುಕಟ್ಟೆಗಳಲ್ಲಿನ ಚಲನೆಗಳು ಮತ್ತು ಪ್ರಮುಖ ಆರ್ಥಿಕ ಸೂಚಕಗಳಿಂದ ಪ್ರಭಾವಿತವಾಗುವ ನಿರೀಕ್ಷೆಯಿದೆ.
ಕಳೆದ ವಾರವಿಡೀ ಕುಸಿದಿದ್ದ ಚಿನ್ನದ ದರ ಶುಕ್ರವಾರ ಸ್ವಲ್ಪ ಏರಿಕೆ ಕಂಡು ಶನಿವಾರ ಮತ್ತೆ ಕುಸಿದಿತ್ತು.
ಶುಕ್ರವಾರ ಪ್ರಮುಖ ಜಾಗತಿಕ ಕರೆನ್ಸಿಗಳ ವಿರುದ್ಧ ಅಮೆರಿಕನ್ ಡಾಲರ್ ಮೌಲ್ಯ ಕುಸಿತ ಕಂಡಿದ್ದು, ಹೂಡಿಕೆದಾರರು ಚಿನ್ನ ಖರೀದಿಸಲು ಪ್ರೋತ್ಸಾಹವಿತ್ತು. ಬೆಳ್ಳಿಯ ದರ ಬಹುತೇಕ ಸ್ಥಿರವಾಗಿತ್ತು. ಇದೀಗ ಸೋಮವಾರ ಮತ್ತೆ ಚಿನ್ನದ ದರ ಕುಸಿದಿದೆ. ಬೆಳ್ಳಿ ದರ ಸ್ಥಿರವಾಗಿದೆ.
ಈ ವಾರದಲ್ಲಿ ಚಿನ್ನದ ಬೆಲೆಗಳು ಅಮೆರಿಕ-ಇರಾನ್ ನಡುವಿನ ಮಾತುಕತೆಗಳ ಬೆಳವಣಿಗೆಗಳು, ಕಚ್ಚಾ ತೈಲ ಮಾರುಕಟ್ಟೆಗಳಲ್ಲಿನ ಚಲನೆಗಳು ಮತ್ತು ಪ್ರಮುಖ ಆರ್ಥಿಕ ಸೂಚಕಗಳಿಂದ ಪ್ರಭಾವಿತವಾಗುವ ನಿರೀಕ್ಷೆಯಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.
ತಜ್ಞರ ಪ್ರಕಾರ, ಬಡ್ಡಿದರಗಳ ಸುತ್ತಲಿನ ನಿರೀಕ್ಷೆಗಳನ್ನು ರೂಪಿಸುವಲ್ಲಿ ಅಮೆರಿಕದ ಫೆಡರಲ್ ರಿಸರ್ವ್ ಅಧಿಕಾರಿಗಳ ಹೇಳಿಕೆಗಳು ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ ಮತ್ತು ಚಿನ್ನದ ಮೇಲೆ ಅಲ್ಪಾವಧಿ ಪ್ರಭಾವ ಬೀರಬಹುದು. ದೀರ್ಘಾವಧಿಯಲ್ಲಿ ಚಿನ್ನದ ಓಟ ಬದಲಾಗುವ ಸಾಧ್ಯತೆಯಿಲ್ಲ. ಆದರೆ ಅಲ್ಪಾವಧಿಯಲ್ಲಿ ಭೌಗೋಳಿಕ ರಾಜಕೀಯದ ಅನಿಶ್ಚಿತತೆ ಚಿನ್ನದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.
ಕುಸಿದ ಚಿನ್ನದ ದರ
ಜೂನ್ 1ರಂದು ಸೋಮವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಮೇ 30ರ ಶನಿವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 82 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,56,220 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 75 ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,43,200 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 61 ರೂ. ಕುಸಿದು, ಹತ್ತು ಗ್ರಾಂಗೆ 1,17,170 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಜೂನ್ 1ರಂದು ಸೋಮವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕುಸಿದಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,622 (-82) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,320 (-75) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,717 (-61) ರೂ. ಬೆಲೆಗೆ ಬಂದು ತಲುಪಿದೆ.
ಸ್ಥಿರವಾದ ಬೆಳ್ಳಿಯ ಮೌಲ್ಯ
ಮಾರ್ಚ್ ಮತ್ತು ಎಪ್ರಿಲ್ ನಲ್ಲಿ 2,55,000 ರೂ. ಸುತ್ತ ಮುತ್ತ ಬಂದು ನಿಂತಿದ್ದ ಬೆಳ್ಳಿಯ ಮೌಲ್ಯ ಮೇ ಆರಂಭದಲ್ಲಿ ಪ್ರತಿ ಕೆಜಿಗೆ 2,90,000 ಲಕ್ಷದವರೆಗೂ ಏರಿತ್ತು. ನಂತರ, ಬಹುತೇಕ ತಿಂಗಳಿಡೀ ಅದೇ ಬೆಲೆಯ ಆಸುಪಾಸಿನಲ್ಲಿ ಮುಂದುವರಿದಿತ್ತು. ಕಳೆದ ವಾರ ಬೆಳ್ಳಿಯ ಮೌಲ್ಯ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಇಂದೂ ಅದೇ ಬೆಲೆಗೆ ಸ್ಥಿರವಾಗಿ ನಿಂತಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,637 (-82) ರೂ., 22 ಕ್ಯಾರೆಟ್ ಚಿನ್ನದ ದರ 14,335 (-75) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,622 (-82) ರೂ., 22 ಕ್ಯಾರೆಟ್ ಚಿನ್ನದ ದರ 14,320 (-75) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,627 (-82) ರೂ., 22 ಕ್ಯಾರೆಟ್ ಚಿನ್ನದ ದರ 14,325 (-75) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,818 (-142) ರೂ., 22 ಕ್ಯಾರೆಟ್ ಚಿನ್ನದ ದರ 14,500 (-130) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,622 (-82) ರೂ., 22 ಕ್ಯಾರೆಟ್ ಚಿನ್ನದ ದರ 14,320 (-75) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,622 (-82) ರೂ., 22 ಕ್ಯಾರೆಟ್ ಚಿನ್ನದ ದರ 14,320 (-75) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,637 (-82) ರೂ., 22 ಕ್ಯಾರೆಟ್ ಚಿನ್ನದ ದರ 14,335 (-75) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,637 (-82) ರೂ., 22 ಕ್ಯಾರೆಟ್ ಚಿನ್ನದ ದರ 14,335 (-75) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,637 (-82) ರೂ., 22 ಕ್ಯಾರೆಟ್ ಚಿನ್ನದ ದರ 14,335 (-75) ರೂ.

