Dailyhunt Logo
  • Light mode
    Follow system
    Dark mode
    • Play Story
    • App Story
ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆ.15ರ ವರೆಗೆ ಅವಧಿ ವಿಸ್ತರಣೆ : ಸರಕಾರ ಆದೇಶ

ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆ.15ರ ವರೆಗೆ ಅವಧಿ ವಿಸ್ತರಣೆ : ಸರಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮೇ 31ರೊಳಗೆ ಪೂರ್ಣಗೊಂಡಿರುವ ಎಲ್ಲ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆ.15ರ ವರೆಗೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಜೂ.20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆದೇಶ ಹೊರಡಿಸುವ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ನಿರ್ಧರಿಸಲಾಗಿತ್ತು.

ಅದರಂತೆ, ಜೂ.22ರಂದು ಆದೇಶವನ್ನು ಹೊರಡಿಸಲಾಗಿತ್ತು.

ಇದೀಗ, ರಾಜ್ಯ ಸರಕಾರವು ಆದೇಶವನ್ನು ಮಾರ್ಪಡಿಸಿ, ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿನ ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೂ ಸಹ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi