ಮಂಗಳೂರು ಸೆ.1: ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಸರಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಒಸಿ ಅಥವಾ ಪ್ರೊಪೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಕಾರ್ಯಾಲಯದಿಂದ ಅರ್ಜಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.
