Dailyhunt Logo
  • Light mode
    Follow system
    Dark mode
    • Play Story
    • App Story
ಸಿಇಸಿ ಸೇರಿದಂತೆ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿದ ಕೇಂದ್ರ ಸರಕಾರ

ಸಿಇಸಿ ಸೇರಿದಂತೆ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಪ್ರಧಾನಿ, ಕೇಂದ್ರ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯ ಮೂಲಕ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಿಯವರ ಪಾತ್ರವನ್ನು ಸಂಶಯಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಸಾಂವಿಧಾನಿಕ ನ್ಯಾಯಾಲಯಗಳು ಕಾರ್ಯಾಂಗವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತದೆ ಎಂಬ ಊಹೆಯ ಮೇಲೆ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಆಯ್ಕೆ ಸಮಿತಿಯನ್ನು ಪ್ರಶ್ನಿಸುವುದು ಎಂದರೆ ಸಂಸತ್ತಿನ ಕಾನೂನು ರೂಪಿಸುವ ವಿವೇಕವನ್ನು ಹಾಗೂ ಚುನಾಯಿತ ಸಂಸ್ಥೆಗಳ ಮೇಲೆ ಸಂವಿಧಾನ ಇಟ್ಟಿರುವ ನಂಬಿಕೆಯನ್ನು ಅನುಮಾನಿಸಿದಂತಾಗುತ್ತದೆ ಎಂದು ಸರಕಾರ ಹೇಳಿದೆ.

"ಪ್ರಧಾನಮಂತ್ರಿ ಹುದ್ದೆಗೆ ತನ್ನದೇ ಆದ ಗೌರವ ಮತ್ತು ಮಹತ್ವವಿದೆ" ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಧಾನಮಂತ್ರಿಯ ನಿರ್ಧಾರವನ್ನು ನಂಬಲು ಸಾಧ್ಯವಿಲ್ಲ ಎಂದಾದರೆ, ಸಚಿವ ಸಂಪುಟ ರಚಿಸುವಾಗ ಮಾಜಿ ನ್ಯಾಯಾಧೀಶರು ಅಥವಾ ಹೊರಗಿನವರನ್ನು ಸಂಪರ್ಕಿಸಬೇಕು ಎಂಬ ನಿಬಂಧನೆಯನ್ನು ಏಕೆ ಹೊಂದಿಲ್ಲ ಎಂದು ಅವರು ಪ್ರಶ್ನಿಸಿದರು.

ಈ ವಾದಗಳನ್ನು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರ ವಿಭಾಗೀಯ ಪೀಠದ ಮುಂದೆ ಸಲ್ಲಿಸಲಾಯಿತು. ಈ ಪೀಠವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ- 2023ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi