Saturday, 27 Feb, 3.11 pm ವಾರ್ತಾಭಾರತಿ

ಕರಾವಳಿ
ಸಿಸಿಬಿ ಪೊಲೀಸರಿಂದ ಐಶಾರಾಮಿ ಕಾರು ಮಾರಾಟ ಪ್ರಕರಣ: ಇನ್‌ಸ್ಪೆಕ್ಟರ್ ರಾಮಕೃಷ್ಣ, ಕಬ್ಬಾಳ್‌ರಾಜ್ ಅಮಾನತು

ಮಂಗಳೂರು : ವಂಚನೆ ಕೇಸ್ ವೊಂದರಲ್ಲಿ ವಶಕ್ಕೆ ಪಡೆದಿದ್ದ ಐಶಾರಾಮಿ ವಾಹನಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಹಿಂದೆ ಸಿಸಿಬಿಯಲ್ಲಿದ್ದ ಪಿಎಸ್‌ಐ ಕಬ್ಬಾಳ್‌ ರಾಜ್ ಹಾಗೂ ನಾರ್ಕೊಟಿಕ್ಸ್ ಆಯಂಡ್ ಎಕನಾಮಿಕ್ಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿರುವ ಇನ್‌ಸ್ಪೆಕ್ಟರ್ ರಾಮಕೃಷ್ಣ ಹಾಗೂ ಚಿಕ್ಕಮಗಳೂರಿನಲ್ಲಿರುವ ಪಿಎಸ್‌ಐ ಕಬ್ಬಾಳ್‌ ರಾಜ್ ಅವರನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ‌ ಇನ್ನಷ್ಟು ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತುಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Varthabharathi
Top