Dailyhunt
ಸುದೀಪ್ ರೈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ: ಎಸ್ಪಿಗೆ ಕರವೇ ಮನವಿ

ಸುದೀಪ್ ರೈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ: ಎಸ್ಪಿಗೆ ಕರವೇ ಮನವಿ

ಡುಪಿ, ಎ.2: ದ.ಕ ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ರೈ ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತರಾಗಿದ್ದು ಈ ಸಾವಿನ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಘಟಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕ ರ ವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಯಂತೆ ಕಾಣುತ್ತಿದ್ದರೂ ಈ ಸಾವಿನ ಬಗ್ಗೆ ಹಲವಾರು ಊಹಾಪೋಹಗಳು ಕೇಳಿ ಬರುತ್ತಿದೆ. ಸುದೀಪ್ ರನ್ನು ಮೊದಲು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ನಾನು 3 ದಿನ ಸತತ ಸುದೀಪ್‌ನ ಸಂಪರ್ಕದಲ್ಲಿದ್ದೆ ಎಂದರು.

ಈ ಸಂದರ್ಭದಲ್ಲಿ ಕ ರ ವೇ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಶೇರಿಗಾರ್ತಿ, ಮಹಿಳಾ ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಘಟಕದ ಉಪಾಧ್ಯಕ್ಷ ಅಲ್ಫೊನ್ಸೋ ಮೆನೆಜಸ್, ಸಲಹೆಗಾರ ಸವಿತಾ ಹಾಗೂ ಸಂಘಟನೆಯ ಪ್ರಮುಖರಾದ ನಾಗರಾಜ್, ಧರ್ಮ ಮತ್ತು ಪಾಂಡು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi