Dailyhunt

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಲಸಿಕೆ ಲಭ್ಯತೆ ವಿವರ

ಉಡುಪಿ, ಜು.26: ಜಿಲ್ಲೆಯಲ್ಲಿ ಜು. 27 ಮಂಗಳವಾರದಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿ ರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi