Dailyhunt

ಉಡುಪಿ: ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ Sep 14, 2021

ಉಡುಪಿ, ಸೆ.14: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮ ಮತ್ತು ವೃತ್ತಿಪರ ಪದವಿವರೆಗೆ ಸರಕಾರದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ವಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರಿಂದ ಪಡೆದು, ಒಂದರಿಂದ ಅಂತಿಮ ಪದವಿ/ಡಿಪ್ಲೋಮವರೆಗೆ ಅಕ್ಟೋಬರ್ 15ರೊಳಗೆ ಹಾಗೂ ವೃತ್ತಿಪರ ಪದವಿ ವ್ಯಾಸಂಗ ಮಾಡುತ್ತಿರುವವರು ನವೆಂಬರ್ 15ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi