Dailyhunt Logo
  • Light mode
    Follow system
    Dark mode
    • Play Story
    • App Story
Udupi | ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Udupi | ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಡುಪಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ಧ್ವಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದು, ಶಾಸಕ ಯಶ್ಪಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿದರು. ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಯಶ್ಪಾಲ್ ಸುವರ್ಣರನ್ನು ರಾವಣನಂತೆ ಬಿಂಬಿಸಿ ಹಾಕಲಾದ ಪೋಸ್ಟರ್ ಎಲ್ಲರ ಗಮನ ಸೆಳೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಾಗ್ಮಿ ನಿಕೇತ್ ರಾಜ್ ಮೌರ್ಯ, ಕಾಂಗ್ರೆಸ್ ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಅಮೃತ್ ಶೆಣೈ, ಪ್ರಖ್ಯಾತ್ ಶೆಣೈ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಭಾಗವಹಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Varthabharathi