Dailyhunt Logo
  • Light mode
    Follow system
    Dark mode
    • Play Story
    • App Story
Uttar Pradesh | ಪತಿಯನ್ನು ಕೊಲೆ ಮಾಡಿ ಶೌಚಾಲಯದಲ್ಲಿ ಹೂತು ಹಾಕಿದ ಆರೋಪ; ಪತ್ನಿಯ ಬಂಧನ

Uttar Pradesh | ಪತಿಯನ್ನು ಕೊಲೆ ಮಾಡಿ ಶೌಚಾಲಯದಲ್ಲಿ ಹೂತು ಹಾಕಿದ ಆರೋಪ; ಪತ್ನಿಯ ಬಂಧನ

ಗ್ರಾ, ಜು. 4: ಉತ್ತರ ಪ್ರದೇಶದ ಆಗ್ರಾದಲ್ಲಿ ಪತಿಯನ್ನು ಕೊಲೆ ಮಾಡಿ, ಆತನ ಶವವನ್ನು ಮನೆಯ ಶೌಚಾಲಯದಲ್ಲಿ ಹೂತು ಹಾಕಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಮಹಿಳೆಯನ್ನು ರುಬಿ ಎಂದು ಗುರುತಿಸಲಾಗಿದೆ. ತನ್ನ ಪತಿ ಸುರೇಂದ್ರ ಶರ್ಮಾ ನಾಪತ್ತೆಯಾಗಿದ್ದಾರೆ ಎಂದು ಆಕೆ ದೂರು ದಾಖಲಿಸಿದ ದಿನದಿಂದ, ಅಂದರೆ ಕಳೆದ 45 ದಿನಗಳಿಂದ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು.

ತನಿಖೆಯ ಸಂದರ್ಭದಲ್ಲಿ, ರುಬಿ ತನ್ನ ಪತಿಯ ಪತ್ತೆಗಾಗಿ ಪೊಲೀಸರೊಂದಿಗೆ ಸೇರಿ ಹುಡುಕಾಟ ನಡೆಸಿದ್ದಾಳೆ. ಆದರೆ, ಕೊಲೆಯಾದ ವ್ಯಕ್ತಿಯ ಸಹೋದರ ರುಬಿ ಮೇಲೆ ಅನುಮಾನ ವ್ಯಕ್ತಪಡಿಸಿದ ಬಳಿಕ ಪೊಲೀಸರು ಆಕೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆಕೆ ಪತಿಯನ್ನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.

ಶೌಚಾಲಯದ ನೆಲದ ಮೇಲಿನ ಸಿಮೆಂಟ್ ಪ್ಲಾಸ್ಟರ್ ಪದರವನ್ನು ಕಾರ್ಮಿಕರ ಸಹಾಯದಿಂದ ಒಡೆದು ಪೊಲೀಸರು ಶವವನ್ನು ಹೊರತೆಗೆದಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಶವವನ್ನು ಹೂತು ಹಾಕಲು ರುಬಿಗೆ ಬೇರೆ ಯಾರಾದರೂ ಸಹಾಯ ಮಾಡಿದ್ದಾರೆಯೇ ಮತ್ತು ಈ ಪ್ರಕರಣದಲ್ಲಿ ಇತರ ಆರೋಪಿಗಳ ಪಾತ್ರ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi