Dailyhunt Logo
  • Light mode
    Follow system
    Dark mode
    • Play Story
    • App Story
ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ 47 ಅಧಿಕಾರಿಗಳನ್ನು ವಜಾ ಮಾಡಿದ NTA

ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ 47 ಅಧಿಕಾರಿಗಳನ್ನು ವಜಾ ಮಾಡಿದ NTA

ಹೊಸದಿಲ್ಲಿ: NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ CJP (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆಯ ಬಳಿಕ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವ ಕ್ರಮಗಳ ಭಾಗವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಯು 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ತಪ್ಪು ಮಾಡಿದ ಅಧಿಕಾರಿಗಳಿಗೆ ಕಠಿಣ ಸಂದೇಶ ರವಾನಿಸುವ ಉದ್ದೇಶದಿಂದ ಸಂಸ್ಥೆಯು ಅವರ ವಿರುದ್ಧ ಕಾನೂನು ಹಾಗೂ ಕ್ರಿಮಿನಲ್ ಕ್ರಮವನ್ನೂ ಆರಂಭಿಸಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು The Indian Express ವರದಿ ಮಾಡಿದೆ.

ಇದು ಕೇವಲ ಆರಂಭಿಕ ಹಂತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿದು ಬಂದಿದೆ.

ಈ ನಡುವೆ, ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವವರಿಗೆ ವಿಧಿಸಲಾಗುವ ಶಿಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಒಪ್ಪಿಗೆ ನೀಡಿದೆ. ಪ್ರಸ್ತಾವಿತ ಶಾಸನದ ಕರಡನ್ನು ತಮಗೆ ಸಲ್ಲಿಸಲಾಗಿದೆ ಹಾಗೂ ಅದನ್ನು ಸಚಿವ ಸಂಪುಟ ಪರಿಶೀಲಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ ಒಂದು ದಿನದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಮೂಲಗಳ ಪ್ರಕಾರ, ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ, 2024ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಡಿಸುವ ಸಾಧ್ಯತೆಯಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi