Dailyhunt Logo
  • Light mode
    Follow system
    Dark mode
    • Play Story
    • App Story
Vijayapura | ಚಡಚಣದಲ್ಲಿ ಆರು ಮಂದಿಯ ಭೀಕರ ಕೊಲೆ ಪ್ರಕರಣ; 12 ಆರೋಪಿಗಳ ಬಂಧನ

Vijayapura | ಚಡಚಣದಲ್ಲಿ ಆರು ಮಂದಿಯ ಭೀಕರ ಕೊಲೆ ಪ್ರಕರಣ; 12 ಆರೋಪಿಗಳ ಬಂಧನ

​ವಿಜಯಪುರ : ತೀವ್ರ ಸಂಚಲನ ಮೂಡಿಸಿರುವ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದ 6 ಮಂದಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.

​ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ವಿವಿಧೆಡೆ ದಾಳಿ ನಡೆಸಿ ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರನ್ನೂ ಇಂದು ಇಂಡಿ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

​ಗೋವಿಂದಪುರದಲ್ಲಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಎಸ್ಪಿಯವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ನೆರೆ ರಾಜ್ಯಗಳು ಹಾಗೂ ಜಿಲ್ಲೆಯ ವಿವಿಧೆಡೆ ಜಾಲ ಬೀಸಿದ್ದ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

​"ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೊಲೆಗೆ ನಿಖರ ಕಾರಣ ಹಾಗೂ ಇದರಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi