Dailyhunt Logo
  • Light mode
    Follow system
    Dark mode
    • Play Story
    • App Story

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

ಮಡಿಕೇರಿ : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಆರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ "ರಾಷ್ಟ್ರಮಟ್ಟದ ಫುಟ್ಬಾಲ್ ತೀರ್ಪುಗಾರ ಧೀರಜ್ ರೈ ಶ್ರೀನಿವಾಸ್' ವರದಿಗೆ ಕೆ.ಎಂ.ಇಸ್ಮಾಯಿಲ್ ಕಂಡಕರೆ ಅವರು ʼಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿʼ ಪಡೆದುಕೊಂಡಿದ್ದಾರೆ.

ʼಅತ್ಯುತ್ತಮ ಕೃಷಿ ವರದಿ ಪ್ರಶಸ್ತಿʼಗೆ ಇಬ್ಬರು ವರದಿಗಾರರು ಜಂಟಿಯಾಗಿ ಆಯ್ಕೆಯಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ "ಸಮಗ್ರ ಕೃಷಿಯಲ್ಲಿ ಯಶ ಕಂಡ ರೈತ" ವರದಿಗೆ ಪಿ.ವಿ. ಅಂತೋಣಿ ಹಾಗೂ ಟಿ.ವಿ.1 ವಾಹಿನಿಯಲ್ಲಿ ಪ್ರಕಟಗೊಂಡ '45 ಏಕರೆ ಗದ್ದೆಯಲ್ಲಿ ಭತ್ತ ಬೆಳೆದ ಅನ್ನದಾತ' ವರದಿಗೆ ಎಂ.ಕೆ. ರವಿಕುಮಾರ್ ಭಾಜನರಾಗಿದ್ದಾರೆ.

ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ "ಹುಟ್ಟುಹಬ್ಬದ ಉಡುಗೊರೆಯಾಗಿ ಮನೆ ಹಸ್ತಾಂತರಿಸಿದ ಜನಸೇವಕ" ವರದಿಗೆ ಕಿಶೋರ್ ಕುಮಾರ್ ಶೆಟ್ಟಿ ಅವರು ʼಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿʼ ಪಡೆದುಕೊಂಡಿದ್ದಾರೆ. ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ " ವನ್ಯಜೀವಿಗಳ ಆತಂಕದ ನಡುವೆ ರೈತರು-ಕಾರ್ಮಿಕರು: ಕೃಷಿ ಕೆಲಸಕ್ಕೆ ಹಿನ್ನಡೆ" ವರದಿಗೆ ಎ.ಎನ್.ವಾಸು ಅವರು ʼಅತ್ಯುತ್ತಮ ಅರಣ್ಯ ಮತ್ತು ವನ್ಯಜೀವಿ ವರದಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ " ಮರಗೋಡು ವಿದ್ಯಾಸಂಸ್ಥೆಗೆ ಬೀಗ: 62 ವರ್ಷದ ವೈಭವಕ್ಕೆ ತೆರೆ" ವರದಿಗೆ ಆರ್. ಸುಭ್ರಮಣಿ ಅವರು ʼಅತ್ಯತ್ತಮ ಶೈಕ್ಷಣಿಕ ವರದಿ ಪ್ರಶಸ್ತಿʼಗೆ ಭಾಜನರಾಗಿದ್ದಾರೆ.

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ಗುಹ್ಯ ಅವರ ಅಧ್ಯಕ್ಷತೆಯಲ್ಲಿ ಮೇ.24 ರಂದು ನಡೆಯುವ ಸಂಘದ ವಾರ್ಷಿಕ ಮಹಾಸಭೆಯ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು, ಪ್ರಶಸ್ತಿ ಪಡೆದ ಎಲ್ಲಾ ಪತ್ರಕರ್ತ ಮಿತ್ರರಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್. ಮುಸ್ತಫ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi