Dailyhunt Logo
  • Light mode
    Follow system
    Dark mode
    • Play Story
    • App Story
ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜು.8ರಂದು ರಜೆ

ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜು.8ರಂದು ರಜೆ

ಬೆಳಗಾವಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬುಧವಾರ (ಜುಲೈ 8) ರಜೆ ಘೋಷಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ.

ಆದರೆ, ಪಿಯುಸಿ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನದಿಗಳು, ಹಳ್ಳಗಳು ಮತ್ತು ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi