Dailyhunt Logo
  • Light mode
    Follow system
    Dark mode
    • Play Story
    • App Story
West Bengal | ಪಕ್ಷ ವಿರೋಧಿ ಚಟುವಟಿಕೆ ಆರೋಪ: ಇಬ್ಬರು ಶಾಸಕರನ್ನು ಉಚ್ಚಾಟಿಸಿದ TMC

West Bengal | ಪಕ್ಷ ವಿರೋಧಿ ಚಟುವಟಿಕೆ ಆರೋಪ: ಇಬ್ಬರು ಶಾಸಕರನ್ನು ಉಚ್ಚಾಟಿಸಿದ TMC

ಕೋಲ್ಕತ್ತಾ: ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಶಾಸಕರಾದ ಸಂದೀಪನ್ ಸಹಾ ಮತ್ತು ರಿತಬ್ರಾತ ಬ್ಯಾನರ್ಜಿ ಅವರನ್ನು ಸೋಮವಾರ TMC ಉಚ್ಚಾಟಿಸಿದೆ.

ಸೋಹನ್ ದೇಬ್ ಭಟ್ಟಾಚಾರ್ಯರನ್ನು ವಿಧಾನಸಭೆಯ ವಿಪಕ್ಷ ನಾಯಕರನ್ನಾಗಿ TMC ಅನುಮೋದಿಸಿದ ಪತ್ರಕ್ಕೆ ನಕಲಿ ಸಹಿ ಮಾಡಲಾಗಿದೆ ಎಂದು ಇಬ್ಬರು ಶಾಸಕರು ದೂರು ನೀಡಿದ್ದಾರೆ.

ಈ ಕುರಿತು ರಾಜ್ಯ ಕಾರ್ಯಾಲಯದಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ಕ್ಷಣಗಳಲ್ಲಿ ಈ ಉಚ್ಚಾಟನೆ ಮಾಡಲಾಗಿದೆ.

"ನೀವು ಅಖಿಲ ಭಾರತೀಯ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಚುನಾಯಿತರಾಗಿದ್ದರೂ, ಪಕ್ಷದ ಮಾನ್ಯತೆ ಪಡೆದ ನಾಯಕತ್ವವು ಆಯೋಜಿಸಿದ ಸಭೆಗಳಲ್ಲಿ ಭಾಗವಹಿಸಲು ವಿಫಲರಾಗಿದ್ದೀರಿ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಿ ಎಂಬ ಸಂಗತಿಯನ್ನು ಸಕ್ಷಮ ಪ್ರಾಧಿಕಾರದ ಮೂಲಕ ಅಖಿಲ ಭಾರತೀಯ ತೃಣಮೂಲ ಕಾಂಗ್ರೆಸ್ ಪಕ್ಷದ ಗಮನಕ್ಕೆ ತರಲಾಗಿದೆ" ಎಂದು ಇಬ್ಬರು ಶಾಸಕರಿಗೆ ಹೊರಡಿಸಲಾದ ನೋಟಿಸ್ನಲ್ಲಿ ಹೇಳಲಾಗಿದೆ.

"ನೀವು ತೊಡಗಿಸಿಕೊಂಡಿರುವ ಚಟುವಟಿಕೆಗಳು ಹಾಗೂ ನೀಡಿರುವ ಹೇಳಿಕೆಗಳು ಅಖಿಲ ಭಾರತೀಯ ತೃಣಮೂಲ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗೆ ಧಕ್ಕೆ ತರುವಂತಿವೆ ಎಂಬ ಸಂಗತಿಯನ್ನೂ ಗಮನಕ್ಕೆ ತೆಗೆದುಕೊಳ್ಳಲಾಗಿದೆ" ಎಂದೂ ಪಕ್ಷದ ಉಪಾಧ್ಯಕ್ಷ ಚಂದ್ರಿಮ ಭಟ್ಟಾಚಾರ್ಯ ಸಹಿ ಮಾಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.

"ಈ ವಿಷಯವನ್ನು ಸೂಕ್ತವಾಗಿ ಪರಿಗಣಿಸಿದ ಬಳಿಕ, ಅಖಿಲ ಭಾರತೀಯ ತೃಣಮೂಲ ಕಾಂಗ್ರೆಸ್ ಪಕ್ಷದ ಸಕ್ಷಮ ಪ್ರಾಧಿಕಾರವು ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲು ನಿರ್ಧರಿಸಿದೆ" ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi