Dailyhunt Logo
  • Light mode
    Follow system
    Dark mode
    • Play Story
    • App Story
West Bengal | ಸಚಿವ ಸಂಪುಟ ವಿಸ್ತರಣೆ; 35 ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ

West Bengal | ಸಚಿವ ಸಂಪುಟ ವಿಸ್ತರಣೆ; 35 ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ

ಕೋಲ್ಕತಾ, ಜೂ. 1: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ತಮ್ಮ ಸಚಿವ ಸಂಪುಟವನ್ನು ಸೋಮವಾರ ಮೊದಲ ಬಾರಿಗೆ ವಿಸ್ತರಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿಯ 35 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೋಲ್ಕತ್ತಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್.

ರವಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ವಿಸ್ತರಣೆಯೊಂದಿಗೆ ಸಚಿವ ಸಂಪುಟದ ಒಟ್ಟು ಬಲ 6ರಿಂದ 41ಕ್ಕೆ ಏರಿಕೆಯಾಗಿದೆ. ಇದು 294 ಸದಸ್ಯಬಲದ ಪಶ್ಚಿಮಬಂಗಾಳ ವಿಧಾನಸಭೆಯಲ್ಲಿ ಅನುಮತಿಸಲಾದ ಸಚಿವರ ಗರಿಷ್ಠ ಸಂಖ್ಯೆಗೆ ಮೂರು ಸ್ಥಾನಗಳಷ್ಟೇ ಕಡಿಮೆ ಇದೆ.

ಪ್ರಮಾಣ ವಚನ ಸ್ವೀಕರಿಸಿದ 35 ಜನರಲ್ಲಿ 13 ಮಂದಿ ಸಂಪುಟ ಸಚಿವರಾಗಿ, ಮೂವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಮತ್ತು 19 ಮಂದಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Varthabharathi