Dailyhunt Logo
  • Light mode
    Follow system
    Dark mode
    • Play Story
    • App Story
ಎಚ್‌ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ಪರೋಕ್ಷ ಟಾಂಗ್! 'ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲಿಲ್ಲವೆಂದ್ರೆ ದ್ವೇಷಿಸುತ್ತಾರೆ'

ಎಚ್‌ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ಪರೋಕ್ಷ ಟಾಂಗ್! 'ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲಿಲ್ಲವೆಂದ್ರೆ ದ್ವೇಷಿಸುತ್ತಾರೆ'

Vijay Karnataka 1 month ago

ಹಾಸನ: ಕಾರ್ಯವೈಖರಿ ಪ್ರಶ್ನಿಸಿ ನಾನಾ ಆರೋಪ ಮಾಡಿರುವ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. "ನಿಮ್ಮನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲಿಲ್ಲವೆಂದರೆ ನಿಮ್ಮನ್ನು ದ್ವೇಷಿಸುತ್ತಾರೆ " ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ವಿಚಾರವಾಗಿ ಮಾಜಿ ಸಚಿವ ಶಾಸಕ ಎಚ್‌ಡಿ ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಂತಹ ಜಿಲ್ಲಾಧಿಕಾರಿಯನ್ನು ನೋಡಿಲ್ಲ

''ಮೀಸಲು ನಿಗದಿಯಲ್ಲಿ ನಿಯಮಗಳನ್ನು ಪಾಲಿಸದೆ ಜಿಲ್ಲಾಧಿಕಾರಿ ಕಾನೂನು ಉಲ್ಲಂಘಿಸಿದ್ದಾರೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಜಿಲ್ಲಾಧಿಕಾರಿಯನ್ನು ನೋಡಿಲ್ಲ. ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವೇ ಶಾಶ್ವತವಾಗಿ ಇರಲಿದೆ ಎಂದು ಅವರು ಭಾವಿಸಿಕೊಂಡಂತಿದೆ. ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಕಾರ್ಯ ನಿರ್ವಹಿಸಬಾರದು,'' ಎಂದು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ್ದರು.

''ಗ್ರಾಪಂ ಮೀಸಲು ನಿಗದಿ ವಿಚಾರದಲ್ಲಿ ತಹಸೀಲ್ದಾರ್‌ ನೀಡಿರುವ ವರದಿಯನ್ನು ಬದಿಗೊತ್ತಿ, ರಾಜಕೀಯ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಯೇ ಮೀಸಲು ಬದಲಾವಣೆ ಮಾಡಿದ್ದಾರೆ'' ಎಂದು ಆರೋಪಿಸಿದ ಅವರು, ''ಮೀಸಲಾತಿ ನಿಗದಿ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದರ ಬಗ್ಗೆ ಜಿಲ್ಲಾಡಳಿತ ಸ್ಪಷ್ಟ ಮಾಹಿತಿ ನೀಡಬೇಕು. ಇಲ್ಲವಾದಲ್ಲಿಡಿಸಿ ಕಚೇರಿ ಆವರಣದಲ್ಲಿಹೋರಾಟ ನಡೆಸಲಾಗುವುದು,''ಎಂದು ಎಚ್ಚರಿಸಿದ್ದರು.

ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲಿಲ್ಲವೆಂದು ದ್ವೇಷ

ಘಟನೆಯ ಬಳಿಕ ಹಾಸನ ಜಿಲ್ಲಾಧಿಕಾರಿ ಕೆಎಸ್‌ ಲತಾ ಕುಮಾರಿ ಅವರು ಟ್ವೀಟರ್‌ನಲ್ಲಿ ಪೋಸ್ಟ್‌ ಹಾಕಿಕೊಂಡಿದ್ದಾರೆ. " ನಿಮ್ಮನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲಿಲ್ಲವೆಂದರೆ ನಿಮ್ಮನ್ನು ದ್ವೇಷಿಸುತ್ತಾರೆ " ಎಂದು ಬರೆದಿದ್ದು, ಜತೆಗೆ ಒಬ್ಬ ವ್ಯಕ್ತಿಯು ತನ್ನ ಕೈಯಲ್ಲಿ ಎಲ್ಲರನ್ನೂ ಹಿಡಿದುಕೊಂಡಿರುವ ಚಿತ್ರ ಒಳಗೊಂಡಿದೆ. ಈ ಮೂಲಕ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದ್ದ ಜಿಲ್ಲಾಧಿಕಾರಿಗಳು ಹಾಗೂ ಎಚ್‌ಡಿ ರೇವಣ್ಣ ಕುಟುಂಬದ ನಡುವಿನ ಜಟಾಪಟಿ ಮುಂದುವರೆದಿದೆ.

ಹಾಸನದಲ್ಲಿ ಜೆಡಿಎಸ್‌ ಪ್ರತಿಭಟನೆ

ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಅವೈಜ್ಞಾನಿಕವಾಗಿ ಮೀಸಲು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ‍್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ನೂರಾರು ಪ್ರತಿಭಟನಾಕಾರರು, ಎನ್‌.ಆರ್‌. ವೃತ್ತದಲ್ಲಿಕೆಲ ಸಮಯ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು. ನಂತರ ಡಿಸಿ ಕಚೇರಿ ಆವರಣದಲ್ಲಿಘೋಷಣೆ ಕೂಗಿ ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

''ಗ್ರಾಪಂ ಚುನಾವಣೆಗೆ ಮೀಸಲು ನಿಗದಿಪಡಿಸುವ ಪ್ರಕ್ರಿಯೆಯಲ್ಲಿನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ, ಹಾಲಿ ಪ್ರಕಟವಾಗಿರುವ ಕರಡು ಮೀಸಲಿನಿಂದ ಹಲವೆಡೆ ಗೊಂದಲ ಉಂಟಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಗ್ರಾಪಂ ಸದಸ್ಯರ ಆಕ್ಷೇಪಣೆಗಳಿಗೆ ಸೂಕ್ತ ಸ್ಪಂದನೆ ದೊರೆತಿಲ್ಲ,''ಎಂದು ಆರೋಪಿಸಿದರು. ''ಸರಕಾರದ ಅಧಿಸೂಚನೆ ಮತ್ತು ನಿಗದಿತ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮೀಸಲು ನಿಗದಿ ಮಾಡಬೇಕು. ಈಗಾಗಲೇ ನಿಗದಿಪಡಿಸಿರುವ ಮೀಸಲು ರದ್ದುಪಡಿಸಬೇಕು, ಇಲ್ಲವಾದರೆ ಕಾನೂನು ಹೋರಾಟ ಸೇರಿದಂತೆ ಉಗ್ರ ಹೋರಾಟ ಮಾಡಲಾಗುವುದು,''ಎಂದು ಎಚ್ಚರಿಸಿದರು.
Dailyhunt
Disclaimer: This content has not been generated, created or edited by Dailyhunt. Publisher: Vijay Karnataka