ಮೈಸೂರು : ಗ್ರಾಪಂ ಅಧಿಕಾರಿಗಳ ಕಣ್ಣಾ-ಮುಚ್ಚಾಲೆಯಾಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರಕಾರ ಜಿಪಿಎಸ್ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ.
ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್‌ರಿಂದ ಹಿಡಿದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತನಕವೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಇದ್ದರೂ ಸಾರ್ವಜನಿಕರಿಗೆ ಕಚೇರಿ ಸಮಯದಲ್ಲಿ ಸಿಗದಿರುವ ದೂರುಗಳು ಬಂದಿರುವ ಕಾರಣಕ್ಕಾಗಿ ರಾಜ್ಯ ಸರಕಾರ ಈಗ ಬೇಕಾಬಿಟ್ಟಿಯಾಗಿ ಓಡಾಡುವ ಅಧಿಕಾರಿಗಳ ಮೇಲೆ ಕಣ್ಗಾವಲು ಇಡಲು ಜಿಪಿಎಸ್ ಮೊರೆ ಹೋಗುತ್ತಿದೆ.
ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಎಲ್ಲ ಪಂಚಾಯಿತಿಗಳಿಗೆ ಮೌಖಿಕ ಸೂಚನೆ ನೀಡಲಾಗಿದೆ.
ಈ ನೂತನ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬಂದರೆ ಕಚೇರಿ ಸಮಯದಲ್ಲಿ ಕಾರ್ಯ ನಿಮಿತ್ತ ಹೊರಗಡೆ ಇದ್ದೇನೆ ಎನ್ನುವ ಮಾತಿಗೆ ಕಡಿವಾಣ ಬೀಳಲಿದೆ. ರಾಜ್ಯದಲ್ಲಿ6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಇಲ್ಲಿಪೌರ ಕಾರ್ಮಿಕರು, ದ್ವಿತೀಯ ದರ್ಜೆ ಸಹಾಯಕರು, ಲೆಕ್ಕ ಸಹಾಯಕರು, ಬಿಲ್ ಕಲೆಕ್ಟರ್, ಕಾರ್ಯದರ್ಶಿ, ಪಿಡಿಒಗಳು, ನೀರುಗಂಟಿಗಳು, ಡಾಟಾ ಎಂಟ್ರಿ ಆಪರೇಟರ್, ಗ್ರಂಥ ಪಾಲಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆ ಇದ್ದು, ಬೆಳಗ್ಗೆ ಮತ್ತು ಸಂಜೆ ಹೊತ್ತು ಪಂಚತಂತ್ರ 2.0 ತಂತ್ರಾಂಶದಲ್ಲಿಬಯೋಮೆಟ್ರಿಕ್ ಒತ್ತಬೇಕಿದೆ.
ಕಾರ್ಯದರ್ಶಿ ಹಾಗೂ ಪಿಡಿಒಗಳು ನಿತ್ಯ ಚಲನ-ವಲನ ವಹಿಯನ್ನು ಬರೆಯಬೇಕು. ಈ ಬುಕ್‌ನಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನ್ಯಾಯಾಲಯಕ್ಕೆ ಹೋಗುವುಧಿದನ್ನು ನಮೂದಿಸಬೇಕು. ಆಶ್ರಯ ಮನೆಗಳ ಜಿಪಿಎಸ್ ಮಾಡುವುದು, ಸ್ಥಳ ಪರಿಶೀಲನೆ ಮೊದಲಾದ ಕೆಲಸಗಳ ವಿಚಾರವನ್ನು ಬರೆದು ಹೋಗುತ್ತಾರೆ. ಆದರೆ, ಅಧಿಲ್ಲಿಗೆ ಹೋಗದೆ ಇದ್ದರೂ ಬಹುತೇಕರು ಪುಸ್ತಕದಲ್ಲಿ ನಮೂದಿಸಿರುವುದು ಕಂಡು ಬರುತ್ತದೆ.
ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಮಾಡಿದ್ದರೂ ಕಚೇರಿಯಲ್ಲಿಮಾತ್ರ ಸಿಬ್ಬಂದಿ ಲಭ್ಯವಿರುವುದಿಲ್ಲ. ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಗ್ರಾಪಂಗಳ ಎಲ್ಲಸರಕಾರಿ ನೌಕರರ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಪಂಚತಂತ್ರ 2.0 ತಂತ್ರಾಂಶದ ಮೂಲಕ ಪಡೆದು ಪ್ರತಿ ತಿಂಗಳು ವೇತನ ಪಾವತಿಸಲು ಕ್ರಮ ಕೈಗೊಳ್ಳುವುದರಿಂದ ಬಯೋ ಮೆಟ್ರಿಕ್‌ನಲ್ಲಿಗೈರು ಇಲ್ಲದಂತೆ ನೋಡಿಕೊಳ್ಳುತ್ತಾರೆ. ಹೀಗಾಗಿಯೇ, ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಲು ಯಾರೂ ಸಿಗುತ್ತಿಲ್ಲಎನ್ನುವ ದೂರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಡಿವಾಣ ಹಾಕಲು ಮುಂದಾಗಿದೆ.

