Dailyhunt Logo
  • Light mode
    Follow system
    Dark mode
    • Play Story
    • App Story
ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್, ಮಾಲ್ ‌ಓಪನ್

ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್, ಮಾಲ್ ‌ಓಪನ್

ನವದೆಹಲಿ: ದೇಶಾದ್ಯಂತ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಸಂಜೆ ಆದೇಶ ಹೊರಡಿಸಿದೆ.

ನಾಲ್ಕನೇ ಹಂತದ ಲಾಕ್‌ಡೌನ್ ನಾಳೆ (ಮೇ 31) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಐದನೇ ಹಂತದ ಲಾಕ್‌ಡೌನ್‌ನ ಈ ಆದೇಶವನ್ನು ಹೊರಡಿಸಲಾಗಿದೆ.

ಮೊದಲ ಹಂತದಲ್ಲಿ ದೇವಸ್ಥಾನಗಳು, ಪ್ರಾರ್ಥನಾ ಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಶಾಪಿಂಗ್ ಮಾಲ್‌ಗಳನ್ನು ಜೂನ್ 8ರಿಂದ ತೆರೆಯಲು ಈ ಆದೇಶದಲ್ಲಿ ಅವಕಾಶ ನೀಡಲಾಗಿದೆ.

ಎರಡನೇ ಹಂತದಲ್ಲಿ ಶಾಲೆ ಕಾಲೇಜುಗಳು, ಶೈಕ್ಷಣಿಕ ತರಬೇತಿ ಸಂಸ್ಥೆಗಳನ್ನು ತೆರೆಯುವುದಕ್ಕೆ ಸಂಬಂಧಿಸಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಇದಕ್ಕೆ ಪೂರಕವಾಗಿ ಶಾಲಾಕಾಲೇಜು ಆಡಳಿತ ಮಂಡಳಿಗಳು ಮತ್ತು ಪಾಲಕರೊಂದಿಗೆ ರಾಜ್ಯ ಸರ್ಕಾರಗಳು ಮಾತುಕತೆ ನಡೆಸಬೇಕು.

ಈ ಸಮಾಲೋಚನೆಯ ಫಲಿತಾಂಶವನ್ನು ನೋಡಿಕೊಂಡು ಶಾಲೆ-ಕಾಲೇಜುಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಜುಲೈ ತಿಂಗಳಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಮೂರನೇ ಹಂತದಲ್ಲಿ ಅಂತಾರಾಷ್ಟ್ರೀಯ ವಿಮಾನ ಯಾನ, ಮೆಟ್ರೋ ರೈಲು ಸೇವೆ, ಸಿನೆಮಾ ಹಾಲ್‌ಗಳು, ಜಿಮ್‌ಗಳು, ಸ್ವಿಮಿಂಗ್ ಪೂಲ್‌ಗಳು, ಮನರಂಜನಾ ಪಾರ್ಕ್‌ಗಳು, ಬಾರ್‌ಗಳು, ಆಡಿಟೋರಿಯಂಗಳು, ದೊಡ್ಡ ದೊಡ್ಡ ಸಮಾರಂಭದ ಸ್ಥಳ ಮುಂತಾದವುಗಳನ್ನು ತೆರೆಯುವ ಬಗ್ಗೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸಲಾಗುವುದು.

ಬಿಎಸ್​ವೈಗೆ ಡಿಕೆಶಿ ಸವಾಲು.. ಅದೂ 24 ಗಂಟೆ ಗಡುವು ವಿಧಿಸಿ!

Dailyhunt
Disclaimer: This content has not been generated, created or edited by Dailyhunt. Publisher: Vijayvani