ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಗರ್ಭಿಣಿಯಾಗಿರುವ 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಸಂತ್ರಸ್ತೆಯ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ನ್ಯಾಯಾಲಯ ಈ ಆದೇಶ ನೀಡಿದೆ.
ಅಪ್ರಾಪ್ತ ಬಾಲಕಿ ಪರವಾಗಿ ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ.
ಅಪ್ರಾಪ್ತ ಬಾಲಕಿ ಪರವಾಗಿ ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ನ ನಿಯಮಾವಳಿಗಳಂತೆ ಬಾಲಕಿಯ ಗೌಪ್ಯತೆಯನ್ನು ನ್ಯಾಯಾಲಯ ರಕ್ಷಿಸಿದೆ.
ಬಾಲಕಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಗತಿಯನ್ನು ಪರಿಶೀಲಿಸಲು ಕೆ.ಸಿ. ಜನರಲ್ ಆಸ್ಪತ್ರೆಯ ಮುಖ್ಯಸ್ಥರ ನೇತೃತ್ವದಲ್ಲಿ ತುರ್ತು ವೈದ್ಯಕಿಯ ಮಂಡಳಿಯನ್ನು ರಚಿಸುವಂತೆ ನ್ಯಾಯಾಲಯವು ಮೇ 19ರಂದು ನಿರ್ದೇಶನ ನೀಡಿತ್ತು. ಬಾಲಕಿಯ ವೈದ್ಯಕಿಯ ತಪಾಸಣೆ ನಡೆಸಿದ ಮಂಡಳಿಯು ಗರ್ಭಪಾತ ಮಾಡುವುದೇ ಸೂಕ್ತ ಎಂದು ಅಂತಿಮ ವರದಿ ಸಲ್ಲಿಸಿತ್ತು. ಈ ವರದಿಯನ್ನು ಅಂಗೀಕರಿಸಿದ ನ್ಯಾಯಪೀಠ, ಗರ್ಭಪಾತಕ್ಕೆ ಅನುಮತಿ ನೀಡಿದೆ.

ಗರ್ಭಪಾತ ನಡೆಸಿದ ನಂತರ ಭ್ರೂಣವನ್ನು ಅತ್ಯಂತ ಜಾಗರೂಕತೆಯಿಂದ ಸಂರಕ್ಷಿಸಿಡಬೇಕು. ಇದು ಅತ್ಯಾಚಾರ ಪ್ರಕರಣದ ತನಿಖೆಗೆ ಪ್ರಮುಖ ಸಾಕ್ಷ$್ಯವಾಗಿದೆ ಎಂದು ನ್ಯಾಯಪೀಠ ಆಸ್ಪತ್ರೆಗೆ ನಿರ್ದೇಶನ ನೀಡಿದೆ.
ಬಾಲಕಿಗೆ ಪರಿಹಾರ:
ಲೈಂಗಿಕ ದೌರ್ಜನ್ಯ ಸಂತ್ರಸ್ತೆಯರ ಪರಿಹಾರ ಯೋಜನೆಯಡಿ ಕಾನೂನುಬದ್ಧವಾಗಿ ಸಿಗಬೇಕಾದ ಕೌನ್ಸಿಲಿಂಗ್, ವೈದ್ಯಕಿಯ ವೆಚ್ಚ ಮತ್ತು 3 ಲಕ್ಷ ರೂಪಾಯಿವರೆಗಿನ ಪರಿಹಾರ ಧನವನ್ನು ಪಡೆದುಕೊಳ್ಳಲು ಸಂತ್ರಸ್ತೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಸಂತ್ರಸ್ತೆಯ ಪರವಾಗಿ ವಿನಂತಿ ಸಲ್ಲಿಸಿದರೆ ಸಂಬಂಧಿಸಿದ ಪ್ರಾಧಿಕಾರಗಳು ಅದನ್ನು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ನ್ಯಾಯಲಯ ತನ್ನ ಆದೇಶದಲ್ಲಿ ತಿಳಿಸಿದೆ.ಇನ್ನಷ್ಟು ಓದಿ