Dailyhunt
ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ.

ರಸ್ತೆ ಬದಿ ಮಳೆನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ.

ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ.

ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ.

ನಗರದಾದ್ಯಂತ 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

'ಅಪ್ಪಾ, ನನ್ನ ಕ್ಷಮಿಸಿ' ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನವ ವಿವಾಹಿತ ವೈದ್ಯೆ

Dailyhunt
Disclaimer: This content has not been generated, created or edited by Dailyhunt. Publisher: Vijayvani