
ಹೋಶಿಯಾರ್‌ಪುರ: ಭಾರತೀಯ ಸೇನೆಯನ್ನು ಇಂಡಿಯಾ ಮೈತ್ರಿಕೂಟ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡಿದೆ. ಇದಕ್ಕಿಂತ ದೊಡ್ಡ ಪಾಪ' ಇರಲಾರದು ಎಂದು ಪ್ರಧಾನಿ ಮೋದಿ ಆಕ್ರೋಶವ್ಯಕ್ತಪಡಿಸಿದರು.
ಧ್ಯಾನಕ್ಕೆ ಭಾರತ ಭೂಶಿರ ಕನ್ಯಾಕುಮಾರಿಗೆ ಬಂದಿಳಿದ ಪ್ರಧಾನಿ ಮೋದಿ: ದೇವಸ್ಥಾನದಲ್ಲಿ ವಿಶೇಷ ಪೂಜೆ
ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ 18ನೇ ಲೋಕಸಭೆ ಚುನಾವಣೆಯ ಕೊನೆಯ ಹಂತದ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಯನ್ನು ದುರ್ಬಲಗೊಳಿಸುವ ಕಾಂಗ್ರೆಸ್ ಮತ್ತು 'ಇಂಡಿಯಾ ಮೈತ್ರಿಕೂಟ' ಪ್ರಯತ್ನವನ್ನು ಎಂದಿಗೂ ಬಿಟ್ಟಿಲ್ಲ ಎಂದು ಆರೋಪಿಸಿದ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಭದ್ರತೆ ಮತ್ತು ದೇಶದ ಯುವಕರ ಭವಿಷ್ಯದೊಂದಿಗೆ ಆಟವಾಡುತ್ತಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಅಗ್ನಿಪಥ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಇದರ ವಿರುದ್ಧ ಮೋದಿ ಕಿಡಿಕಾರಿದರು.
ಭಾರತೀಯ ರಕ್ಷಣಾ ಪಡೆಗಳನ್ನು ಅತ್ಯಂತ ಆಧುನಿಕ ಮತ್ತು ಸಮರ್ಥ ಶಕ್ತಿಯುಳ್ಳ ಸ್ವಾವಲಂಬಿ ಪಡೆಗಳನ್ನಾಗಿ ಮಾಡುವುದು ನನ್ನ ಗುರಿಯಾಗಿದೆ. ಆದರೆ 'ಇಂಡಿಯಾ ಮೈತ್ರಿಕೂಟಕ್ಕೆ' ಕಪ್ಪು ಹಣವನ್ನು ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಸೇನೆಯನ್ನು ಗಣರಾಜ್ಯೋತ್ಸವ ಪರೇಡ್‌ಗೆ ಮಾತ್ರ ರಚಿಸಲಾಗಿಲ್ಲ. ಯುದ್ಧಗಳಲ್ಲಿ ಹೋರಾಡಲು ಶತ್ರುಗಳನ್ನು ಸೋಲಿಸಲು ಮತ್ತು ನಮ್ಮ ಮಾತೃಭೂಮಿಯನ್ನು ರಕ್ಷಿಸಲು ರಚಿಸಲಾಗಿದೆ. ಆದರೆ ವಿರೋಧ ಪಕ್ಷಗಳು ಸೇನೆಯನ್ನು ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಇದಕ್ಕಿಂತ ದೊಡ್ಡ ಪಾಪ ಮತ್ತೊಂದಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.
'ನಾನು ಮೌನವಾಗಿದ್ದೇನೆ ಎಂದು ಇಂಡಿಯಾ ಮೈತ್ರಿಕೂಟಕ್ಕೆ ಹೇಳುತ್ತಿದ್ದೇನೆ. ಮೋದಿಯನ್ನು ಅರ್ಥಮಾಡಿಕೊಳ್ಳುವಲ್ಲಿ ಯಾವುದೇ ತಪ್ಪು ಮಾಡಬೇಡಿ. ಮೋದಿ ಅವರು ಬಾಯಿ ತೆರೆದ ದಿನ, ನಿಮ್ಮ ಏಳು ತಲೆಮಾರುಗಳ ಪಾಪಗಳನ್ನು ಹೊರಗೆ ತರುತ್ತೇನೆ ಎಂದರು.