Dailyhunt Logo
  • Light mode
    Follow system
    Dark mode
    • Play Story
    • App Story
ಭೀಕರ ಅಪಘಾತ ಏಳು ಜನ ಸಾವು

ಭೀಕರ ಅಪಘಾತ ಏಳು ಜನ ಸಾವು

ಬೀದರ್: ನೆರೆಯ ತೆಲಂಗಾಣದ ಜಹೀರಾಬಾದ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತ ಏಳು ಜನ ಕೂಲಿ ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ.ಬೀದರ ತಾಲೂಕಿನ ರಾಜಗೀರಾ ಗ್ರಾಮದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಚಾಲಕ ದೇವದಾಸ ಮಾರುತಿ, ರೇಖಾ ಸಂಜು, ರೇಷ್ಮಾ, ನಿಕಿತಾ, ಶ್ರೀದೇವಿ, ಕವಿತಾ ಗುಂಡಪ್ಪ, ತುಳಮ್ಮ ಮೃತಪಟ್ಟವರು.
ರಾಜಗೀರಾ ಗ್ರಾಮದ ಇನ್ನೂ ಐವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಹೀರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಾಜಗೀರಾ ಗ್ರಾಮದಿಂದ ಈ ಜನ ನಿತ್ಯವೂ ಕೂಲಿ ಕೆಲಸಕ್ಕಾಗಿ ನೆರೆಯ ಜಹೀರಾಬಾದ್‌ಕ್ಕೆ ಹೋಗುತ್ತಿದ್ದರು. ಎಂದಿನAತೆ ಕೆಲಸ ಮುಗಿಸಿ ಆಟೋ (ಟಂಟಂ)ದಲ್ಲಿ ಸ್ವಗ್ರಾಮದ ಕಡೆಗೆ ಬರುವ ವೇಳೆ ಎದುರಿನಿಂದ ಬಂದ್ ಲಾರಿ (ಟ್ಯಾಂಕರ್) ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಖಂಡ್ರೆ ಸಂತಾಪ: ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜಗೀರಾ ಗ್ರಾಮದ ಐವರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆಯ ಬಗ್ಗೆ ತೀವ್ರ ದಿಗ್ಭಮೆ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ ಖಂಡ್ರೆ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ತೆಲಂಗಾಣಕ್ಕೆ ಹೋಗಿದ್ದವರು, ಮರಳಿ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ಇದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲು ತೆಲಂಗಾಣದ ಆಡಳಿತದೊಂದಿಗೆ ಸತತ ಸಂಪರ್ಕದಲ್ಲಿರುವAತೆ ಜಿಲ್ಲಾಽಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆಯೂ ಬೀದರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಈ ನೋವಿನ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ರಾಜ್ಯ ಸರ್ಕಾರ ನಿಲ್ಲುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Vijayvani