ಭೋಪಾಲ್: ವೇಗವಾಗಿ ಬಂದ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಕ್ರಪಾಣಿ ತ್ರಿಪಾಠಿ, ಚಿತ್ರಕೂಟ ರೈಲು ನಿಲ್ದಾಣದಿಂದ ರಾಮಘಾಟ್ ಕಡೆಗೆ ಆಟೋ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಆಟೋಗೆ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಡೆದ ವೇಳೆ ಆಟೋದಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಆಟೋವನ್ನು ಓವರ್ಟೇಕ್ ಮಾಡಲು ಹೋದಾಗ ಅಪಘಾತವಾಗಿದ್ದು, ಸ್ಥಳದಲ್ಲೇ ಐವರು ಪ್ರಾಣಬಿಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪ್ರಯಾಗ್ರಾಜ್ಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ.
IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ
ಬೆಂಗಳೂರು ಸೇರಿದಂತೆ ಹಲವೆಡೆ ವಿಮಾನ ಸಂಚಾರ ರದ್ದು; ವರದಿ ಕೇಳಿದ ಸರ್ಕಾರ
ಐಪಿಎಲ್ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಹಿಟ್ಮ್ಯಾನ್
IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋಬೆಂಗಳೂರು ಸೇರಿದಂತೆ ಹಲವೆಡೆ ವಿಮಾನ ಸಂಚಾರ ರದ್ದು; ವರದಿ ಕೇಳಿದ ಸರ್ಕಾರಐಪಿಎಲ್ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಹಿಟ್ಮ್ಯಾನ್
