Dailyhunt Logo
  • Light mode
    Follow system
    Dark mode
    • Play Story
    • App Story
ಎತ್ತರದ ಕಾಂಪೌಂಡ್ ನಿರ್ಮಾಣಕ್ಕೆ ನಿರ್ಬಂಧ

ಎತ್ತರದ ಕಾಂಪೌಂಡ್ ನಿರ್ಮಾಣಕ್ಕೆ ನಿರ್ಬಂಧ

ಬೆಂಗಳೂರು: ಮಹಾನಗರದಲ್ಲಿ ಶಿಥಿಲ ಕಟ್ಟಡ ಹಾಗೂ ಗೋಡೆಗಳು ನೆಲಕ್ಕುರುಳುವ ಪ್ರಕರಣಗಳಿಗೆ ಕಡಿವಾಣ ಹಾಕುವ ಸಂಬಂಧ, ರಾಷ್ಟ್ರೀಯ ಕಟ್ಟಡ ಸಂಹಿತೆಯ ನಿಯಮಾವಳಿಯಂತೆ ನಿಗದಿತ ಎತ್ತರಕ್ಕಿಂತ ಹೆಚ್ಚಿನ ಮಿತಿವುಳ್ಳ ತಡೆಗೋಡೆ ನಿರ್ಮಿಸಲು ನಿರ್ಬಂಧ ವಿಧಿಸಲು ಜಿಬಿಎ ಮುಂದಾಗಿದೆ.
ರಾಷ್ಟ್ರೀಯ ಕಟ್ಟಡ ಸಂಹಿತೆ (ಎನ್‌ಬಿಬಿ) ನಿಯಮಾವಳಿ ಪ್ರಕಾರ ಅನುಮತಿಸಲಾದ ಎತ್ತರಕ್ಕಿಂತ ಹೆಚ್ಚಿನ ಎತ್ತರದಲ್ಲಿ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಂತಿಲ್ಲ. ಈ ನಿಯಮವನ್ನು ಉಲ್ಲಂಸಿರುವ ವಸತಿ ಹಾಗೂ ವಾಣಿಜ್ಯ ಕಟ್ಟಡಗಳನ್ನು ಗುರುತಿಸಿ ನೋಟಿಸ್ ಜಾರಿ ಮಾಡುವಂತೆ ಜಿಬಿಎ ಆಯಾ ಪಾಲಿಕೆಗಳಿಗೆ ಸೂಚಿಸಿದೆ.
ಈ ನಿದೇರ್ಶನದ ಬೆನ್ನಲ್ಲೇ, ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಕಟ್ಟಡ ಸಂಹಿತೆ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ಎನ್‌ಬಿಬಿ ನಿಯಮ ಉಲ್ಲಂಘನೆ ಆಗಿದ್ದಲ್ಲಿ ಅಂತಹ ಭಾಗವನ್ನು ತೆರವುಗೊಳಿಸಬೇಕು. ಜತೆಗೆ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟುಮಾಡುವ ಶಿಥಿಲಾವಸ್ಥೆಯ ಹಾಗೂ ಅಪಾಯಕಾರಿ ಕಟ್ಟ, ಕಾಂಪೌಂಡ್‌ಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸುವಂತೆ ಆಯುಕ್ತರು ಸೂಚಿಸಿದರು.
ಸಿಎಂಐಡಿಪಿ ಕಾಮಗಾರಿ ಪೂರ್ಣಗೊಳಿಸಿ:ಮುಖ್ಯಮಂತ್ರಿಯವ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಮತ್ತು ಸುರಕ್ಷತೆ ಹಾಗೂ ಸುಸ್ಥಿತ ಮೂಲಸೌಕರ್ಯ ಯೋಜನೆ (ಎಸ್‌ಎಸ್‌ಐಪಿ) ಅಡಿಯಲ್ಲಿ ಕೈಗೊಂಡಿರುವ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ ಸಿವಿಲ್ ಕಾಮಗಾರಿ ಪೂರ್ಣಗೊಂಡಿರುವ ಪ್ಯಾಕೇಜ್‌ಗಳಲ್ಲಿನ ರಸ್ತೆಗಳನ್ನು ಜೂ.9ರೊಳಗೆ ಡಾಂಬರೀಕರಣ ಕೈಗೊಳ್ಳಬೇಕು. ಇನ್ನುಳಿದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ನಿಗದಿತ ಗಡುವಿನೊಳಗೆ ಮುಕ್ತಾಯಗೊಳಿಸುವಂತೆ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು ಕೈಗೊಳ್ಳಲಾಗುತ್ತಿರುವ ಸುರಕ್ಷಾ-75 ಯೋಜನೆ ಅಡಿಯಲ್ಲಿ ಪ್ರಸ್ತಾಪಿತ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗಳ ವಿನ್ಯಾಸಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಬೇಕು. ಜತೆಗೆ ಕಾಮಗಾರಿಗಳ ಅನುಷ್ಠಾನವನ್ನು ವಿಳಂಬವಿಲ್ಲದೆ ಆರಂಭಿಸುವಂತೆ ಆಯುಕ್ತರು ಮುಖ್ಯ ಅಭಿಯಂತರರಿಗೆ ಸೂಚಿಸಿದರು.
ಸಭೆಯಲ್ಲಿ ಪೂರ್ವ ಪಾಲಿಕೆಯ ಅಪರ ಆಯುಕ್ತ (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್, ಮುಖ್ಯ ಅಭಿಯಂತರ ಎಂ ಲೋಕೇಶ್, ಉಪ ಆಯುಕ್ತರಾದ ಶಶಿಕುಮಾರ್ ಮತ್ತು ಮುರಳೀಧರ, ಆರೋಗ್ಯಾಧಿಕಾರಿ ಡಾ. ಸವಿತಾ ಹಾಗೂ ಇತರ ವಿಭಾಗಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಎಎಂಸಿ ಮೂಲಕ ಎಸ್‌ಡಬ್ಲುೃಡಿ ನಿರ್ವಹಣೆ:ಪಾಲಿಕೆ ವ್ಯಾಪ್ತಿಯ ಕಾಂಕ್ರೀಟ್ ಮತ್ತು ಕಚ್ಚಾ ಮಳೆ ನೀರು ಕಾಲುವೆಗಳ (ಎಸ್‌ಡಬ್ಲುೃಡಿ) ಹೂಳು ತೆರವು ಕಾಮಗಾರಿಗಳನ್ನು ವಾರ್ಷಿಕ ನಿರ್ವಹಣೆ ಗುತ್ತಿಗೆ (ಎಎಂಸಿ) ಮೂಲಕ ತುರ್ತಾಗಿ ಕೈಗೊಳ್ಳಬೇಕು. ಕಾಲುವೆಗಳಲ್ಲಿ ಸಂಗ್ರಹವಾಗಿರುವ ಹೂಳು, ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕಳೆಗಿಡಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕಾಲುವೆಗಳಲ್ಲಿ ಮಳೆ ನೀರು ಹರಿಯುವ ಸಾಮರ್ಥ್ಯವನ್ನು ಹೆಚ್ಚಿಸಿ ಸಮರ್ಪಕವಾಗಿ ನಿರ್ವಹಿಸುವಂತೆ ಆಯುಕ್ತರು ನಿರ್ದೇಶಿಸಿದ್ದಾರೆ.

ರಸ್ತೆ ಪುನರ್ ನಿರ್ಮಾಣದ ಕಾಮಗಾರಿ ಕೈಗೊಳ್ಳಿ:ವಿವಿಧ ನಾಗರಿಕ ಸೇವಾ ಪೂರೈಕೆದಾರ ಸಂಸ್ಥೆಗಳು ರಸ್ತೆ ಅಗೆತ ಮಾಡಿರುವ ಸ್ಥಳಗಳನ್ನು ಪರಿಶೀಲಿಸಿ ಅಗತ್ಯವಿರುವ ಕಡೆ ರಸ್ತೆ ಪುನಃಸ್ಥಾಪನೆ ಕಾಮಗಾರಿಗಳನ್ನುನಗರ ಪಾಲಿಕೆಯಿಂದ ಕೈಗೊಳ್ಳಬೇಕು. ಈ ಕಾಮಗಾರಿಗಳಿಗೆ ತಗಲುವ ವೆಚ್ಚವನ್ನು ಸಂಬಂಧಿತ ಸಂಸ್ಥೆಗಳಿಂದ ಬೇಡಿಕೆ ನೋಟಿಸ್ ಮೂಲಕ ವಸೂಲಿ ಮಾಡುವಂತೆ ಆಯುಕ್ತ ಡಿ.ಎಸ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ಓದಿ
Dailyhunt
Disclaimer: This content has not been generated, created or edited by Dailyhunt. Publisher: Vijayvani