ಜೈಪುರ: ಎರಡು ಗುಂಪುಗಳ ನಡುವಿನ ಘರ್ಷಣೆ ಐದು ಮಂದಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಸ್ಥಾನದ ಜಲಾವರ್ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಮೃತರನ್ನು ಗೋವರ್ಧನ್ ಸಿಂಗ್, ಧೀರಜ್ ಸಿಂಗ್, ಭರತ್ ಸಿಂಗ್, ತೂಫಾನ್ ಸಿಂಗ್ ಮತ್ತು ಬಾಲು ಸಿಂಗ್ ಎಂದು ಗುರುತಿಸಲಾಗಿದೆ.
ಆರೋಪಿಗಳು ತಲೆಮಾರಿಸಿಕೊಂಡಿದ್ದು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ 'ಧಮ್' ಹೊಡೆದ ಶಾರುಖ್ ಖಾನ್; ವಿಡಿಯೋ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಜಲಾವರ್ನ ಪಗಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ಗ್ರಾಮದಲ್ಲಿ ಶನಿವಾರ ತಡರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಎದುರಾಳಿ ತಂಡದ ಸದಸ್ಯರು ಘರ್ಷಣೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೊರಟರು. ಈ ವೇಳೆ ಕುಪಿತಗೊಂಡ ಆರೋಪಿಗಳು ಅವರ ಮೇಲೆ ಟಿಪ್ಪರ್ ಹತ್ತಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನೆ ನಡೆದ ಬಳಿಕ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಇವರ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ; ಕೆಕೆಆರ್ ಗೆಲುವಿನ ರೂವಾರಿಗೆ ಭಾರೀ ದಂಡ
ವಿಚಾರಣೆ ವೇಳೆ ಆಸನ ಬದಲಿಸಿದ್ದಕ್ಕೆ ನನ್ನನ್ನು ಕೆಟ್ಟದಾಗಿ ಟ್ರೋಲ್ ಮಾಡಲಾಗಿತ್ತು: ಸಿಜೆಐ ಡಿ.ವೈ. ಚಂದ್ರಚೂಡ್
ನೀತಿ ಸಂಹಿತೆ ಉಲ್ಲಂಘನೆ; ಕೆಕೆಆರ್ ಗೆಲುವಿನ ರೂವಾರಿಗೆ ಭಾರೀ ದಂಡ
