Dailyhunt Logo
  • Light mode
    Follow system
    Dark mode
    • Play Story
    • App Story
ಕಾಳಸಂತೆಗೆ ಪಡಿತರ ಅಕ್ಕಿ ಸಾಗಾಟ!

ಕಾಳಸಂತೆಗೆ ಪಡಿತರ ಅಕ್ಕಿ ಸಾಗಾಟ!

ನಕಪುರ:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಇಲಾಖೆಯ ವೈಫಲ್ಯದಿಂದ ಪಡಿತರ ಧಾನ್ಯಗಳ ಅಕ್ರಮ ದಾಸ್ತಾನು ಮತ್ತು ಸಾಗಾಟ ಕಾಳ ಸಂತೆಯಲ್ಲಿ ಹೆಚ್ಚು ಮಾರಾಟವಾಗುತ್ತಿದೆ ಎಂದು ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ್​ ಆರೋಪಿಸಿದರು.
ನಗರದ ಕೋಟೆ ಗಣಪತಿ ದೇವಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಆಡಳಿತ ಚುರುಕುಗೊಳಿಸುವುದಾಗಿ ಹೇಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರ ೇತ್ರದಲ್ಲೇ ಪಡಿತರ ಅಕ್ಕಿ ಕಾಳಸಂತೆಗೆ ಸಾಗಾಟವಾಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಸಿದರು.
ತಿಂಗಳ ಅವಧಿಯಲ್ಲಿ ಎರಡು ಬಾರಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಕ್ಕಿಯ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸುಮಾರು 18 ಟನ್​ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ತಾಲೂಕು ಆಹಾರ ಶಿರಸ್ತೇದಾರ್​ ಜಯಸಿಂಹ ಹಾಗೂ ನಿರೀಕ್ಷಕಿ ವಿನುತಾ ಅವರು ರ್ನಿಲಕ್ಷ$್ಯ ವಹಿಸಿರುವುದರಿಂದ ಪಡಿತರ ಅಕ್ಕಿಯನ್ನು ಕದ್ದು ಸಾಗಿಸಲಾಗುತ್ತಿದೆ. ಇದನ್ನು ಪಾಲೀಷ್​ ಮಾಡಿ ಮುಕ್ತ ಮಾರುಕಟ್ಟಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಜಾಲ ಇದರ ಹಿಂದೆ ಅಡಗಿದೆ. ಇದಕ್ಕೆ ಕಡಿವಾಣ ಹಾಕಲು ಇವರ ವೈಫಲ್ಯವೇ ಕಾರಣ ಎಂದು ದೂರಿದರು.
ಆಹಾರ ಇಲಾಖೆಯ ಅಧಿಕಾರಿಗಳಿಗೆ ಅಕ್ರಮ ಸಾಗಾಟದ ಕುರಿತು ಮಾಹಿತಿ ನೀಡಲು ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸದಿರುವುದು ಹಾಗೂ ತುರ್ತು ಸಂದರ್ಭದಲ್ಲಿಯೂ ಕರ್ತವ್ಯಲೋಪ ಎಸಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕಾಳಸಂತೆಗೆ ಸಾಗಿಸಲಾಗುತ್ತಿದ್ದ ಅಕ್ಕಿಯನ್ನು ವಾಹನ ಸಮೇತ ಹಿಡಿದುಕೊಟ್ಟರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಅಕ್ರಮ ಸಾಗಾಟಗಾರರಿಗೆ ಅಧಿಕಾರಿಗಳ ಬೆಂಬಲವಿರುವ ಅನುಮಾನ ಕಂಡು ಬಂದಿದೆ. ಆದ್ದರಿಂದ ಆಹಾರ ಇಲಾಖೆಯ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ತನಿಖೆಗೆ ಒಳ ಪಡಿಸಬೇಕಿದೆ ಎಂದರು.

Dailyhunt
Disclaimer: This content has not been generated, created or edited by Dailyhunt. Publisher: Vijayvani