ಕುಕನೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಸೋಮವಾರ ಪಟ್ಟಣದ ಮಗಜಿ ಭವನದಲ್ಲಿ ಯಲಬುರ್ಗಾ ಮಂಡಲದ ಕುಕನೂರು, ಮಂಗಳೂರು, ತಳಕಲ್ ಹಾಗೂ ಇಟಗಿ ಮಹಾಶಕ್ತಿ ಕೇಂದ್ರಗಳ ಬಿಎಲ್‌ಎ-2 ಹಾಗೂ ಬೂತ್ ಅಧ್ಯಕ್ಷರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮದಲ್ಲೂ ಬಿಜೆಪಿಗೆ ಗಟ್ಟಿ ಕಾರ್ಯಕರ್ತರಿದ್ದಾರೆ.
ಬಿಜೆಪಿ ಸಂಘಟನೆ ಒಗ್ಗಟ್ಟಿನ ಪ್ರತೀಕ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನತೆ ಬೇಸತ್ತಿದ್ದು, ಜನರ ಚಿತ್ತ ಬಿಜೆಪಿಯತ್ತ ಇದೆ. ದೇಶದ 26 ರಾಜ್ಯಗಳಲ್ಲಿ ಎಸ್‌ಐಆರ್ ಜಾರಿಯಲ್ಲಿದೆ. ಮತದಾರರ ಪಟ್ಟಿಯನ್ನು ಪಾರದರ್ಶಕಗೊಳಿಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಯಲಬುರ್ಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 7,489 ಮತದಾರರ ವಿವರಗಳನ್ನು ಪರಿಷ್ಕರಣೆ ವೇಳೆ ಕೈಬಿಡಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ ಮಾತನಾಡಿ, ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ಅನ್ಯ ದೇಶಗಳು ಅನುಸರಿಸುತ್ತಿವೆ. ಬಿಎಲ್‌ಎ-1 ಹಾಗೂ ಬಿಎಲ್‌ಎ-2 ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಯಲಬುರ್ಗಾ ಮಂಡಲ ಬಿಜೆಪಿ ಅಧ್ಯಕ್ಷ ಮಾರುತಿ ಗಾವರಾಳ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಸವರಾಜ ಗೌರಾ, ಶಿವಲೀಲಾ ದಳವಾಯಿ, ಅಂಬರೀಶ ಹುಬ್ಬಳ್ಳಿ ಸೇರಿದಂತೆ ಹಲವು ಮುಖಂಡರು ಇದ್ದರು.
ಇನ್ನಷ್ಟು ಓದಿ