ಕಲ್ಕತ್ತಾ: ಏಪ್ರಿಲ್ 17ರಂದು ಇಲ್ಲಿನ ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕಲ್ಕತ್ತಾ ನೈಟ್ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಐಪಿಎಲ್ ಪಂದ್ಯವು ಕಾರಣಾಂತರಗಳಿಂದ ಮುಂದೂಡಲಾಗುತ್ತದೆ ಎಂದು ಹೇಳಲಾಗಿದೆ.
ನಿಗದಿತ ವೇಳಾಪಟ್ಟಿಯ ಪ್ರಕಾರ ಉಭಯ ನಡುವಿನ ಕದನವು ಏಪ್ರಿಲ್ 17ರಂದು ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು.
ತಿಳಿದು ಬಂದಿರುವ ಮಾಹಿತಿ ಪ್ರಕಾರ ಏಪ್ರಿಲ್ 17ರಂದು ರಾಮನವಮಿ ಇದ್ದು, ಹೀಗಾಗಿ ಕಲ್ಕತ್ತಾ ಹಾಗೂ ರಾಜಸ್ಥಾನ ನಡುವಿನ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂಬ ಕಾರಣಕ್ಕೆ ಉಭಯ ತಂಡಗಳ ನಟುವಿನ ಕಾದಾಟವನ್ನು ಸ್ಥಳಾಂತರಿಸುವ ಅಥವಾ ಬೇರೆ ದಿನಾಂಕದಂದು ನಡೆಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ.
ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಆಸ್ತಿ ಎಷ್ಟಿದೆ ಗೊತ್ತಾ?
ರಾಮ ನವಮಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ರಾಮನವಮಿ ಹಾಗೂ ದುರ್ಗಾ ಪೂಜೆ ಕಲ್ಕತ್ತಾ ಮತ್ತು ಇಡೀ ಪಶ್ಚಿಮ ಬಂಗಾಳದಲ್ಲಿ ಬಹಳ ಜನಪ್ರಿಯವಾಗಿದೆ. ಹಾಗಾಗಿ ಪೊಲೀಸ್ ಭದ್ರತೆ ಸಿಗುತ್ತದೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಹೀಗಾಗಿ ಪಂದ್ಯವನ್ನು ಮುಂದೂಡಲು ಬಿಸಿಸಿಐ ಚಿಂತನೆ ನಡೆಸಿದೆ. ಇದಕ್ಕೆ ಸಂಬಂಧಿಸಿದಂತೆ ಫ್ರಾಂಚೈಸಿ, ರಾಜ್ಯ ಸಂಘಗಳು ಮತ್ತು ಪ್ರಸಾರಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.
ಈ ಬಾರಿ, ದೇಶದಲ್ಲಿ ಲೋಕಸಭೆ ಚುನಾವಣೆಯ ಕಾರಣ, ಬಿಸಿಸಿಐ ಐಪಿಎಲ್ 2024 ರ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಿತ್ತು. ಮಂಡಳಿಯು ಮೊದಲ ಹಂತದಲ್ಲಿ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು ಮತ್ತು ನಂತರ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಮಾರ್ಚ್ 22 ರಿಂದ ಪ್ರಾರಂಭವಾದ ಐಪಿಎಲ್ 2024 ರಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಲಾಗಿದೆ.
ಕೋಟ್ಯಂತರ ರೂಪಾಯಿ ಆಸ್ತಿ ಒಡತಿ ಸೌಮ್ಯ ರೆಡ್ಡಿ ತಂದೆಯ ಬಳಿಯೇ ಸಾಲ ಮಾಡಿದ್ದೇಕೆ?
IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ
IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ
