ನವದೆಹಲಿ: ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ಟಿ ಆದಾಯದಲ್ಲಿನ ಕೊರತೆ ಸರಿದೂಗಿಸಲು ಕೇಂದ್ರ ಸರ್ಕಾರ 75 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಗುರುವಾರ ತಿಳಿಸಿದೆ. ಮೇ 28ರಂದು ನಡೆದಿದ್ದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಕೇಂದ್ರ 1.59 ಲಕ್ಷ ಕೋಟಿ ಸಾಲ ಪಡೆದು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದ ಪ್ರಕಾರ ಈ ಪ್ರಕ್ರಿಯೆ ನಡೆಸಿದೆ.
ಪ್ರತಿ ಎರಡು ತಿಂಗಳಿಗೊಮ್ಮೆ ಜಿಎಸ್ಟಿ ಸೆಸ್ ಸಂಗ್ರಹಾನುಸಾರ ಬಿಡುಗಡೆ ಮಾಡುವ ಮೊತ್ತಕ್ಕೆ ಹೊರತಾಗಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಪರಿಸ್ಥಿತಿ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಗಳು ಮಹತ್ವದ ಪಾತ್ರ ವಹಿಸುತ್ತಿವೆ. ಅವುಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬ್ಯಾಕ್ ಟು ಬ್ಯಾಕ್ ಲೋನ್ ಫೆಸಿಲಿಟಿ ಅಡಿ ಈ ಮೊತ್ತವನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದೆ.
ಪೊಲೀಸ್ ಠಾಣೆಗೆ ಹತ್ತಿರದಲ್ಲೇ ಆರ್ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!
ಗುಡ್ಡ ಕುಸಿದು ಮನೆಯಂಗಳಕ್ಕೇ ಜಾರಿ ಬಿದ್ದ ಬಂಡೆ; ಅಪಾಯದಲ್ಲಿದೆ ಗುಡ್ಡದ ಮೇಲಿನ ಶಾಲೆ..
ಕೋವಿಡ್ನಿಂದ ಬಚಾವಾದರೂ ನೆಮ್ಮದಿ ಇಲ್ಲ; ಕಂಡುಬಂದಿದೆ ಮತ್ತೊಂದು ರೋಗ, ಬೋನ್ ಡೆತ್!

