Sunday, 22 Nov, 8.12 pm ವಿಜಯವಾಣಿ

ಸಮಸ್ತ-ಕರ್ನಾಟಕ
ಮಾಜಿ ಸಚಿವ ರೋಷನ್ ಬೇಗ್​ಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ರವಾನೆ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ.

ಇಂದು ಬೆಳಗ್ಗೆಯಷ್ಟೇ ಬೇಗ್​ರನ್ನು ಸಿಬಿಐ ವಶಕ್ಕೆ ಪಡೆದಿತ್ತು. ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿತ್ತು. ಇದೀಗ ಮಾಜಿ ಶಾಸಕ ರೋಷನ್ ಬೇಗ್​ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ತಳಕು ಹಾಕಿಕೊಂಡಿತ್ತು. ಐಎಂಎ ಸಂಸ್ಥಾಪಕ ಮನ್ಸೂರ್ ಅಲಿಖಾನ್​ ಬಂಧನಕ್ಕೂ ಮೊದಲೇ ವಿಡಿಯೋ ಹರಿ ಬಿಟ್ಟು, ರೋಷನ್ ಬೇಗ್ ಹಣ ಪಡೆದಿದ್ದಾರೆಂದು ಆರೋಪಿಸಿದ್ದರು. ಈ ಕುರಿತು ಎಸ್​ಐಟಿ ಸಹ ರೋಷನ್ ಬೇಗ್ ವಿಚಾರಣೆ ನಡೆಸಿತ್ತು.

ಬಳಿಕ ಇದೇ ಪ್ರಕರಣ ಸಿಬಿಐಗೆ ವರ್ಗಾವಣೆಯಾದ ಬೆನ್ನಲ್ಲೆ ರೋಷನ್ ಬೇಗ್ ವಿಚಾರಣೆ ಮುಂದುವರಿಸಿತ್ತು. ಮನ್ಸೂರ್ ಮಾಡಿದ ಆರೋಪಕ್ಕೆ ಪುಷ್ಠಿ ನೀಡುವಂತ ಆಧಾರಗಳು ಸಿಕ್ಕ ಬೆನ್ನಲ್ಲೆ ಸಿಬಿಐ ಇಂದು ಬೆಳಗ್ಗೆ 11.30ಕ್ಕೆ ಬೇಗ್​ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಪೂಜೆ ಮಾಡಿ ಮಂಗಳಾರತಿ ಕೊಡಲು ಬಂದ ಪೂಜಾರಿಗೆ ಕಳ್ಳಭಕ್ತ ಕೊಟ್ಟ ಶಾಕ್​ ಅಂತಿಂಥದ್ದಲ್ಲ!

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Vijayvani
Top