ನವದೆಹಲಿ: ಮೇ 08ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹೀನಾಯವಾಗಿ ಸೋತ ಬಳಿಕ ಲಖನೌ ಸೂಪರ್ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಹಾಗೂ ಮಾಲೀಕ ಸಂಜೀವ್ ಬಹಿರಂಗ ವಾಕ್ಸಮರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಊಹಾಪೋಹಗಳು ಎದ್ದಿದ್ದವು ಮತ್ತು ಪರ-ವಿರೋಧದ ಚರ್ಚೆ ಕೂಡ ಜೋರಾಗಿ ನಡೆದಿತ್ತು.
ಎದ್ದಿರುವ ಊಹಾಪೋಹಗಳಿಗೆ ಈ ಇಬ್ಬರು ತೆರೆ ಎಳೆದಿದ್ದಾರೆ.
ಮೇ 14ರಂದು ನಡೆಯುವ ಪಂದ್ಯದಲ್ಲಿ ಲಖನೌ ಸೂಪರ್ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಶುರುವಾಗುವುದಕ್ಕೂ ಮುನ್ನ ಈ ಇಬ್ಬರು ಪರಸ್ಪರ ಅಪ್ಪಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ. ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ತಂಡದ ನಾಯಕ ಕೆಎಲ್ ರಾಹುಲ್ರನ್ನು ತಮ್ಮ ಮನೆಗೆ ಆಹ್ವಾನಿಸಿ ಜೊತೆಗೆ ಭೋಜನ ಸವಿದಿದ್ದಾರೆ ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಚ್ಚಾ ಬಾದಾಮ್ ಹಾಡು ನಿಮಗೆ ನೆನಪಿದೆಯೇ; ಹಾಡಿದ ವ್ಯಕ್ತಿ ಈಗ ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ ಗೊತ್ತಾ?
ಸಾಮಾಜಿಕ ಜಾಲತಾಣದಲ್ಲಿ ಸಂಜೀವ್ ಗೋಯೆಂಕಾ ಹಾಗೂ ಕೆಎಲ್ ರಾಹುಲ್ ಅವರ ಫೋಟೋವೊಂದು ಸಖತ್ ವೈರಲ್ ಆಗುತ್ತಿದ್ದು, ಈ ಫೋಟೋದಲ್ಲಿ ಸಂಜೀವ್ ಗೋಯೆಂಕಾ, ಕೆಎಲ್ ರಾಹುಲ್ ಅವರನ್ನು ಅಪ್ಪಿಕೊಂಡಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಲಖನೌ ಫ್ರಾಂಚೈಸಿಯ ಮಾಲೀಕ ಸಂಜೀವ್, ಕ್ಯಾಪ್ಟನ್ ರಾಹುಲ್ ಅವರನ್ನು ತಮ್ಮ ಮನೆಗೆ ಊಟಕ್ಕೆ ಆಹ್ವಾನಿಸಿದ ಸಂದರ್ಭದಲ್ಲಿ ಈ ಇಬ್ಬರು ಅಪ್ಪಿಕೊಂಡಿರುವ ಫೋಟೋವನ್ನು ಕ್ಲಿಕ್ಕಿಸಲಾಗಿದೆ. ಕೆಎಲ್ ರಾಹುಲ್ ಮನೆಗೆ ಬಂದ ತಕ್ಷಣ ಸಂಜೀವ್ ಗೋಯೆಂಕಾ ಅವರನ್ನು ಅಪ್ಪಿಕೊಂಡು ಸ್ವಾಗತಿಸಿದರು ಎಂಬುದನ್ನು ಫೋಟೋ ನೋಡಿ ಅರ್ಥ ಮಾಡಿಕೊಳ್ಳಬಹುದಾಗಿದೆ.
ಸಂಜೀವ್ ಗೋಯೆಂಕಾ ಮತ್ತು ಕೆಎಲ್ ರಾಹುಲ್ ನಡುವಿನ ಈ ಘಟನೆ ನಡೆದ ಬಳಿಕ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟಿಕೊಂಡಿತ್ತು. ಕೆಎಲ್ ರಾಹುಲ್ ತಂಡವನ್ನು ತೊರೆಯಲ್ಲಿದ್ದಾರೆ ಎಂಬ ವದಂತಿ ಮೊದಲು ಹುಟ್ಟಿಕೊಂಡಿತ್ತು. ಆ ಬಳಿಕ ಮಾಲೀಕ ಸಂಜೀವ್ ಗೋಯೆಂಕಾ ಅವರೇ ಕೆಎಲ್ ರಾಹುಲ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ತಂಡದಿಂದ ಹೊರಹಾಕುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇಷ್ಟೆಲ್ಲಾ ಆದ ಮೇಲೆ ಈಗ ಬಂದಿರುವ ಫೋಟೋ ನೋಡಿದರೆ ಲಕ್ನೋ ತಂಡದಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿದಿವೆ ಎಂದು ಹೇಳಲಾಗಿದೆ.
ಚೆನ್ನೈ-ಆರ್ಸಿಬಿ ನಡುವಿನ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯ; ಚಿಂತೆಯಲ್ಲಿ ಫ್ರಾಂಚೈಸಿ
ಕಚ್ಚಾ ಬಾದಾಮ್ ಹಾಡು ನಿಮಗೆ ನೆನಪಿದೆಯೇ; ಹಾಡಿದ ವ್ಯಕ್ತಿ ಈಗ ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ ಗೊತ್ತಾ?
ಚೆನ್ನೈ-ಆರ್ಸಿಬಿ ನಡುವಿನ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯ; ಚಿಂತೆಯಲ್ಲಿ ಫ್ರಾಂಚೈಸಿ
