Dailyhunt Logo
  • Light mode
    Follow system
    Dark mode
    • Play Story
    • App Story
ಔದ್ಯೋಗಿಕ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಗೆ ಆದ್ಯತೆ ಕೊಡಿ

ಔದ್ಯೋಗಿಕ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಗೆ ಆದ್ಯತೆ ಕೊಡಿ

ಬಾಗಲಕೋಟೆ: ಔದ್ಯೋಗಿಕ ಕ್ಷೇತ್ರದಲ್ಲಿ ಸಾಮಾಜಿಕ ಜವಾಬ್ದಾರಿ, ಮಾನವೀಯ ಮೌಲ್ಯಗಳ ಜೊತೆಗೆ ಕೌಶಲ್ಯ ವೃದ್ಧಿಗೂ ಆದ್ಯತೆ ನೀಡಬೇಕು ಎಂದು ಜಿಎಸ್‌ಡಬ್ಲೂ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ರಂಜಿತ್ ಕುಮಾರ್ ಪಿ. ಸಲಹೆ ನೀಡಿದರು.
ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿAಗ್ ಕಾಲೇಜಿನಲ್ಲಿ ಮಂಗಳವಾರ ನಡೆದ ಬಿವಿವಿ ಸಂಘದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ೨೭ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಪಾಲಕರು, ಸ್ನೇಹಿತರು ಹಾಗೂ ಹಿತೈಷಿಗಳ ತ್ಯಾಗ ಮತ್ತು ಆಶೀರ್ವಾದವಿರುತ್ತದೆ. ಆದ್ದರಿಂದ ಪದವೀಧರರು ಅವರೆಲ್ಲರನ್ನೂ ಸದಾ ಸ್ಮರಿಸಿ ಕೃತಜ್ಞರಾಗಿರಬೇಕು. ವೃತ್ತಿಜೀವನದ ಆರಂಭದಲ್ಲಿ ಅಡೆತಡೆಗಳು ಎದುರಾಗುವುದು ಸಹಜ. ಶಿಕ್ಷಕರು ಹಾಗೂ ಪಾಲಕರು ನೀಡಿದ ಭದ್ರ ಬುನಾದಿಯನ್ನು ನೆನಪಿಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ವ್ಯಾಸಂಗದ ಸಂದರ್ಭದಲ್ಲಿ ಕಲಿತ ಕೌಶಲ್ಯಕ್ಕೂ ಕಾರ್ಪೊರೇಟ್ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಅಗತ್ಯವಿರುವ ಕೌಶಲ್ಯಕ್ಕೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಇದನ್ನು ಅರಿತು ನಿರಂತರವಾಗಿ ಹೊಸ ಕೌಶಲ್ಯಗಳನ್ನು ಕಲಿಯಬೇಕು ಎಂದರು. ತಂಡದಲ್ಲಿ ಕೆಲಸ ಮಾಡುವಾಗ ಪರಸ್ಪರ ಸಹಕಾರ ನೀಡುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವೃತ್ತಿ ಜೀವನದ ಮೊದಲ ೫ ರಿಂದ ೧೦ ವರ್ಷಗಳಲ್ಲಿ ಹೆಚ್ಚಿನ ಸಂಬಳಕ್ಕಿAತ ಕೌಶಲ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ತಿಳಿಸಿದರು.
ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಮಾತನಾಡಿ, ಬಿವಿವಿ ಸಂಘದ ವ್ಯಾಪ್ತಿಯಲ್ಲಿ ನಾಲ್ಕು ಕಾಲೇಜುಗಳಿದ್ದು, ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕಳೆದ ೨೭ ವರ್ಷಗಳಿಂದ ಶೈಕ್ಷಣಿಕ ಸೇವೆ ಸಲ್ಲಿಸುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮಾತನಾಡಿ, ಇಂದು ನೀವು ಕೇವಲ ಪ್ರಮಾಣ ಪತ್ರವನ್ನು ಸ್ವೀಕರಿಸುತ್ತಿಲ್ಲ. ಈ ಸಂಸ್ಥೆಯಿAದ ಒಂದು ಜವಾಬ್ದಾರಿಯನ್ನು ಹೊತ್ತು ಹೊರಡುತ್ತಿದ್ದೀರಿ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಿ ಎಂದು ತಿಳಿಸಿದರು.
೫೫ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಸಮಾರಂಭದಲ್ಲಿ ಒಟ್ಟು ೫೫ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಡಾ. ಅಮರೇಶ ಚರಂತಿಮಠ ಪ್ರತಿಜ್ಞಾ ವಿಽ ಬೋಽಸಿದರು. ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ರಾಜು ಪಲ್ಲೆದ, ಸಂತೋಷ ಜಕಾತಿ. ಬಿಮ್ಸ್ ನಿರ್ದೇಶಕ ಡಾ. ಪ್ರಕಾಶ ವಡವಡಗಿ, ಡಾ.ಪವನ ಬೆನಕಟ್ಟಿ, ಡಾ. ಸೀಮಾ ಆರ್, ಸಂತೋಷ ಕುಮಾರ ಇದ್ದರು.

Dailyhunt
Disclaimer: This content has not been generated, created or edited by Dailyhunt. Publisher: Vijayvani