Pavithra Gowda's ex-husband Sanjay Singh passes away: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. 7-8 ತಿಂಗಳ ಹಿಂದೆಯೇ ಅವರು ನಿಧನರಾಗಿದ್ದು, ತಡವಾಗಿ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಮದ್ಯಸೇವನೆಯಿಂದ ಸಾವು ಶಂಕೆ
ಸಂಜಯ್ ಸಿಂಗ್ ಅವರು ಹಲವಾರು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯು ಪಡೆದುಕೊಳ್ಳುತ್ತಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಪವಿತ್ರ ಗೌಡ ಅವರೊಂದಿಗಿನ ಡಿವೋರ್ಸ್ ಕೇಸ್ ನಂತರ ಸಂಜಯ್ ಸಿಂಗ್ ಹೆಚ್ಚು ಮದ್ಯ ಸೇವನೆ ಮಾಡುತ್ತಿದ್ದರು. ಇದೇ ಕಾರಣದಿಂದಾಗಿ ಅವರು ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಡಿವೋರ್ಸ್ ಪಡೆದಿದ್ದ ಪವಿತ್ರಾ ಗೌಡ
ಮಾಧ್ಯಮಗಳ ವರದಿ ಪ್ರಕಾರ, ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ಅವರು 2007ರ ಆಸುಪಾಸಿನಲ್ಲಿ ಪ್ರೀತಿಸಿ ಮದುವೆಯಾಗಿದ್ದರು. 2011ರಲ್ಲಿ ಡಿವೋರ್ಸ್ ಪಡೆದುಕೊಂಡಿದ್ದರು. ಇವರಿಗೆ ಒಬ್ಬ ಮಗಳಿದ್ದಾರೆ. ಡಿವೋರ್ಸ್ ಬಳಿಕ ಪವಿತ್ರಾ ಗೌಡ ಹಾಗೂ ಸಂಜಯ್ ಸಿಂಗ್ ಜೊತೆಗೆ ಒಡನಾಟ ಇರಲಿಲ್ಲ.ಪವಿತ್ರಾ ಗೌಡಗೂ ಜ್ವರ
ಪವಿತ್ರಾ ಗೌಡ ಅವರು ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸೂಕ್ತ ವೈದ್ಯಕೀಯ ಸೌಲಭ್ಯ ನೀಡುವಂತೆ ನ್ಯಾಯಾಧೀಶರು ಸೂಚನೆ ಕೊಟ್ಟಿದ್ದು, ಆರೋಗ್ಯ ಸುಧಾರಿಸಿದ ಬಳಿಕ ಕೇಸ್ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.ಪವಿತ್ರಾ ಗೌಡ ನನ್ನ ಮಗಳಿದ್ದಂತೆ
ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ವೇಳೆ, ಅಲ್ಲಿನ ಸ್ಥಿತಿ-ಗತಿ ಆಹಾರದ ಕ್ರಮದ ಬಗ್ಗೆ ಪರಿಶೀಲನೆ ನಡೆಸಿದ್ದರು. ಜೊತೆಗೆ ಮಹಿಳಾ ಕೈದಿಗಳ ಜೊತೆ ಮಾತನಾಡಿಸಿದ್ದರು. ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಪವಿತ್ರಾ ಗೌಡ ನನ್ನ ಮಗಳಿದ್ದಂತೆ. ಅವರ ಮನಸ್ಥಿತಿ ಅಷ್ಟಾಗಿ ಚೆನ್ನಾಗಿಲ್ಲ, ನೊಂದಿದ್ದಾರೆ ಎಂದು ಹೇಳಿದರು, (ಏಜೆನ್ಸೀಸ್).
