ವಿಜಯವಾಣಿ

475k Followers

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೇಲುಗೈ, ಚಿತ್ರದುರ್ಗಕ್ಕೆ ಕೊನೇ ಸ್ಥಾನ

18 Jun 2022.11:42 AM

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.

ಶನಿವಾರ ಬೆಳಗ್ಗೆ 11.30ಕ್ಕೆ ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಚಿವರು, ಒಟ್ಟಾರೆ ಫಲಿತಾಂಶ ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. ಮೂರು ವಿಭಾಗದಲ್ಲಿ ಒಟ್ಟಾರೆ ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ ಹೊರ ಹೊಮ್ಮಿದೆ. ಕೊನೇ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಗೆ ಶೇ.49.31 ಫಲಿತಾಂಶ ಬಂದಿದೆ ಎಂದು ವಿವರಿಸಿದರು.

ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಏ.22ರಿಂದ ಮೇ 18ರ ವರೆಗೆ ಪರೀಕ್ಷೆ ನಡೆದಿತ್ತು. ಮಧ್ಯಾಹ್ನ 12 ಗಂಟೆ ನಂತರ https://pue.karnataka.gov.in/ ವೆಬ್​ಸೈಟ್​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್​ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags