Wednesday, 25 Nov, 10.20 am ವಿಜಯವಾಣಿ

ಮುಖಪುಟ
ಪ್ರಭಾವಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ: ಗಣ್ಯರ ಸಂತಾಪ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಅಹ್ಮದ್ ಪಟೇಲ್​ ಅವರು ಬುಧವಾರ ನಸುಕಿನ 3.30ರ ವೇಳೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದ್ದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಿಧಿವಶರಾದರು.

ಅವರಿಗೆ 71 ವರ್ಷ ವಯಸ್ಸಾಗಿತ್ತು. ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಈ ವಿಷಯವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ. ಅಹ್ಮದ್ ಪಟೇಲ್ ಅವರು ನೆಹರು-ಗಾಂಧಿ ಕುಟುಂಬದ ಅತ್ಯಾಪ್ತರೆಂದು ಗುರುತಿಸಿಕೊಂಡವರು. ರಾಜ್ಯಸಭೆಯಲ್ಲಿ ಅವರು ಗುಜರಾತನ್ನು ಪ್ರತಿನಿಧಿಸುತ್ತಿದ್ದರು.

ಕಳೆದ ತಿಂಗಳು ಅವರಿಗೆ ಕೋವಿಡ್ 19 ಸೋಂಕು ತಗುಲಿತ್ತು. ಕೂಡಲೇ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿಧಾನವಾಗಿ ಅವರ ಆರೋಗ್ಯ ಕ್ಷೀಣಿಸುತ್ತ ಬಂದಿದ್ದು, ಬಹುಅಂಗಾಂಗ ವೈಫಲ್ಯ ಸಂಭವಿಸಿತ್ತು. ಆದಾಗ್ಯೂ, ಕಳೆದ ವಾರ ಅವರ ಪುತ್ರ ಫೈಸಲ್, ತಂದೆಯವರ ಆರೋಗ್ಯದಲ್ಲಿ ಸುಧಾರಣೆ ಇದೆ ಎಂದು ಹೇಳಿದ್ದರು. ರಾಹುಲ್ ಗಾಂಧಿ ಕೂಡ ಕಳೆದ ವಾರ ಟ್ವೀಟ್ ಮಾಡಿ, ಶೀಘ್ರ ಗುಣಮುಖರಾಗಿ. ಪಟೇಲ್ ಅವರ ಮಾರ್ಗದರ್ಶನ ಪ್ರತಿ ಹೆಜ್ಜೆಯಲ್ಲೂ ಪಕ್ಷಕ್ಕೆ ಅಗತ್ಯವಿದೆ ಎಂದು ಹಾರೈಸಿದ್ದರು.

ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಮತ್ತಿತರರು ಅಹ್ಮದ್ ಪಟೇಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

(ಏಜೆನ್ಸೀಸ್)

ಅಧಿಕಾರ ಇಲ್ದೇ ಇದ್ರೂ ಪಕ್ಷದ ಮೇಲೆ ಹಿಡಿತ ಇಟ್ಟುಕೊಂಡಿದ್ರು ಪಟೇಲ್ !

ಕಾಂಗ್ರೆಸ್ ಮುಖಂಡ ಅಹಮ್ಮದ್​ ಪಟೇಲ್ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್​

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Vijayvani
Top