ಧಾರವಾಡ: ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಜಾರಿಯಾದ ನಂತರ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗಕ್ಕೆ ನೇಮಿಸಬಾರದು. ಮಕ್ಕಳನ್ನು ಹೋಟೆಲ್, ಗ್ಯಾರೇಜ್ ಹಾಗೂ ಇತರೆ ಕೆಲಸಗಳಿಗೆ ನೇಮಿಸುವುದು ಕಾನೂನು ಬಾಹಿರವಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ ಹಕ್ಕಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಹೇಳಿದರು.
ರಾಮನಗರದ ಆದರ್ಶ ಬಾಲಿಕಾ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಽ ಬೋಧಿಸಿ ಮಾತನಾಡಿದರು.
ಸರ್ಕಾರವು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಶಾಲೆಗಳಲ್ಲಿ ಉಚಿತ ಪಠ್ಯಪುಸ್ತಕ, ಸಮವಸ್ತç, ಹಾಲು ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿ ವಿವಿಧ ಸೌಲಭ್ಯ ಒದಗಿಸುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಬಡಿಗೇರ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ದುಡಿಮೆಗೆ ತೊಡಗಿಸಬಾರದು. ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿಶ್ವ ಬಾಲಕಾರ್ಮಿಕ ವಿರೋಽ ದಿನದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ವೈ. ಪಾಟೀಲ, ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ಹಳೇಮನಿ, ಜಿಲ್ಲಾ ಕಾರ್ಮಿಕ ಅಽಕಾರಿ ಮಾರಿಕಾಂಬಾ ಹುಲಕೋಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ಪಾಟೀಲ್, ಬಿಇಒ ಸುಜಾತಾ ತಿಮ್ಮಾಪೂರ ಇತರರಿದ್ದರು.
ಜಿಲ್ಲಾ ಕಾರ್ಮಿಕ ಅಽಕಾರಿ ಅಕ್ಬರ್ ಹಬೀಬಸಾಬ ಮುಲ್ಲಾ ಸ್ವಾಗತಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ನಿರೂಪಿಸಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಅಕ್ರಮ್ ಅಲ್ಲಾಪುರ ವಂದಿಸಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಜಾಗೃತಿ ಜಾಥಾ ನಡೆಯಿತು. ಜಾಥಾ ಆದರ್ಶ ಬಾಲಿಕಾ ಪ್ರೌಢಶಾಲೆಯಿಂದ ಆರಂಭವಾಗಿ ಲೈನ್ ಬಜಾರ್, ಸಂಗಮ ವೃತ್ತ ಮಾರ್ಗವಾಗಿ ಎನ್‌ಟಿಟಿಎಫ್ ವರೆಗೆ ಸಾಗಿತು.
ಇನ್ನಷ್ಟು ಓದಿ