ವಿಜಯವಾಣಿ
491k Followersಬೆಂಗಳೂರು: ಇಂದು (ಜೂನ್ 13 ಸೋಮವಾರ) ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಎಲ್ಲೆಲ್ಲಿ ನಡೆಯಲಿವೆ ಚುನಾವಣೆಗಳು?
*ಕರ್ನಾಟಕ ವಾಯವ್ಯ ಪದವೀಧರರ ಕ್ಷೇತ್ರ - ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
*ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ - ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು.
*ಕರ್ನಾಟಕ ವಾಯವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
*ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.
ಇದರ ಅರ್ಥ ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ಕಾನ್ವೆಂಟ್ನಲ್ಲಿ ಲೈಂಗಿಕ ದೌರ್ಜನ್ಯ, ಕೊಲೆ? ಕಣ್ಣಾರೆ ಕಂಡ ಸಿಸ್ಟರ್ಗೆ ಜೀವ ಬೆದರಿಕೆ- ದೂರು ದಾಖಲು
'ಭಾರತದ ಸ್ನೇಹಿತರೇ… ಸತ್ಯದ ಪರವಾಗಿ ನಿಲ್ಲಿ… ಕಾನೂನು ಇರುವಾಗ ಛೇ… ಇಂಥವರಿಗೆ ತಲೆಬಾಗುವಿರಾ?'
ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್: 43 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಇಎಲ್
ಎಲ್ಲೆಲ್ಲಿ ನಡೆಯಲಿವೆ ಚುನಾವಣೆಗಳು?
Disclaimer
This story is auto-aggregated by a computer program and has not been created or edited by Dailyhunt Publisher: Vijayvani