Dailyhunt Logo
  • Light mode
    Follow system
    Dark mode
    • Play Story
    • App Story
ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಶಂಕಿತ ಧರಿಸಿದ್ದ ಕ್ಯಾಪ್​ನಿಂದ ಸಿಕ್ತು ಮಹತ್ವದ ಸುಳಿವು

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಶಂಕಿತ ಧರಿಸಿದ್ದ ಕ್ಯಾಪ್​ನಿಂದ ಸಿಕ್ತು ಮಹತ್ವದ ಸುಳಿವು

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ (NIA) ಮಹತ್ವದ ಸುಳಿವು ದೊರೆತ್ತಿದ್ದು, ಸ್ಫೋಟಕ್ಕೂ ಹಾಗೂ ಚೆನ್ನೈಗೂ ಸಂಬಂಧ ಇರುವುದನ್ನು ಎನ್​ಎಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಸ್ಫೋಟಕ್ಕೂ ಮುನ್ನ 2 ತಿಂಗಳು ಇತ ತಮಿಳುನಾಡಿನಲ್ಲಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. 1000ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳ ಪರಿಶೀಲನೆ ಬಳಿಕ ಇಬ್ಬರು ಶಂಕಿತರನ್ನು ಪತ್ತೆಹಚ್ಚಲಾಗಿದೆ.

ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ತಮಿಳುನಾಡಿನ ಪ್ರತಿಷ್ಠಿತ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದ್ದು, ಜೊತೆಗೆ ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್​​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಪತ್ತೆಯಾದ ಕ್ಯಾಪ್​​ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಎನ್​ಐಎ ಅಧಿಕಾರಿಗಳು ಡಿಎನ್​​ಎ ಟೆಸ್ಟ್​ಗೆ ನೀಡಿದ್ದಾರೆ.

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಶಂಕಿತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವ ಎಂದು ಗೊತ್ತಾಗಿದ್ದು, ಜನವರಿಯಿಂದ ಚೆನ್ನೈನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ತಂಗಿದ್ದ ಎಂದು ತಿಳಿದುಬಂದಿದೆ. ಶಂಕಿತನನ್ನು ಮುಸಾವೀರ್‌ ಹುಸೇನ್‌ ಶಜೀಬ್‌ ಎಂದು ಗುರುತಿಸಲಾಗಿದೆ. ಆತ ಹಾಕಿಕೊಂಡ ಟೋಪಿಯನ್ನು ಆತನ ಸಹಾಯಕ ಚೆನ್ನೈನ ಆರ್‌ಕೆ ಸಲಾಯ್‌ ಮಾಲ್‌ನಲ್ಲಿ ಖರೀದಿಸಿದ್ದಾನೆ. ಇಬ್ಬರು ಕೂಡ ಚೆನ್ನೈನ ಟ್ರಿಪ್ಲಿಕೇನ್‌ನಲ್ಲಿ ತಿಂಗಳಿಗೂ ಹೆಚ್ಚು ಕಾಲ ತಂಗಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮುಸಾವೀರ್‌ ಹುಸೇನ್‌ ಶಜೀಬ್‌ನ ಸಹಾಯಕನನ್ನು ಅಬ್ದುಲ್‌ ಮಾಥರ್ನ್‌ ತಹಾ ಎಂದು ಗುರುತಿಸಲಾಗಿದ್ದು, ಆತ ಕೂಡ ತೀರ್ಥಹಳ್ಳಿಯವನಾಗಿದ್ದು, ಶಿವಮೊಗ್ಗ ಐಸಿಸ್‌ ಮಾಡ್ಯೂಲ್‌ನ ಭಾಗವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಹಾ ತಲೆಯಲ್ಲಿ ಕೂದಲು ಇಲ್ಲದ್ದರಿಂದ ಟೋಪಿ ಹಾಕುತ್ತಿದ್ದ, ಟ್ರಪ್ಲಿಕೇನ್‌ನ ಲಾಡ್ಜ್‌ನಲ್ಲಿ ತಂಗಿದ್ದಾಗ ಟೋಪಿ ಖರೀದಿಸಿದ್ದ ಎನ್ನಲಾಗಿದೆ. ಅದೇ ಟೋಪಿಯನ್ನು ಮುಸಾವೀರ್‌ ಹುಸೇನ್‌ ಶಜೀಬ್‌ ಧರಿಸಿದ್ದ ಬಾಂಬರ್‌ ರಾಮೇಶ್ವರಂ ಕೆಫೆ ಬಾಂಬ್‌ನಲ್ಲಿ ಸ್ಫೋಟ ನಡೆಸಿದ್ದ ಎನ್ನಲಾಗಿದೆ.

ಮಾರ್ಚ್​ 01ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಮಾ.13 ರಂದು ಎನ್​ಐಎ ತಂಡ ಬಳ್ಳಾರಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದರು. ಶಬ್ಬೀರ್ ಎಂಬಾತನನ್ನು ಎನ್​ಐಎ ಆಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದರು. ಜೊತೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿತ್ತು.

IPL 2024; ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ಕಿಂಗ್​ ಕೊಹ್ಲಿ

ಇಳಿ ವಯಸ್ಸಿನಲ್ಲಿ ಸಿಧು ಮೂಸೆವಾಲ ಪೋಷಕರಿಗೆ ಗಂಡು ಮಗು ಜನನ; ಆರೋಗ್ಯ ಕಾರ್ಯದರ್ಶಿಗೆ ಶೋಕಾಸ್​ ನೋಟಿಸ್​ ಜಾರಿ

IPL 2024; ಉದ್ಘಾಟನಾ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ಕಿಂಗ್​ ಕೊಹ್ಲಿ
Dailyhunt
Disclaimer: This content has not been generated, created or edited by Dailyhunt. Publisher: Vijayvani