ಅಥಣಿ: ಬಡವರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಬೇಕು. ಸರ್ಕಾರಿ ಅಧಿಕಾರಿಗಳು ಈ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.
ಪಟ್ಟಣದ ತಾಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ನೀರು, ಶೌಚಗೃಹ ಸೌಲಭ್ಯ ಸಮರ್ಪಕವಾಗಿಲ್ಲ.
ಪಟ್ಟಣದ ತಾಲೂಕು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ನೀರು, ಶೌಚಗೃಹ ಸೌಲಭ್ಯ ಸಮರ್ಪಕವಾಗಿಲ್ಲ.
ಜನರು ಸಮಸ್ಯೆಯಿಂದ ಠಾಣೆಗೆ ಬಂದಾಗ ಅವರ ದೂರು ಸ್ವೀಕರಿಸಿ, ಸಮಸ್ಯೆಗೆ ತುರ್ತಾಗಿ ಸ್ಪಂದಿಸಬೇಕು. ಅದರಲ್ಲೂ ಮಹಿಳೆಯರು ಠಾಣೆಗೆ ಬಂದಾಗ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರಗೆ ಸೂಚಿಸಿದರು.
ಆಸ್ಪತ್ರೆ ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ, ತಹಸೀಲ್ದಾರ್ ಸಿದರಾಯ ಭೋಸಗಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮಂಜುನಾಥ ಸೌಂದಲಗೇಕರ ಇತರರಿದ್ದರು.
ಇನ್ನಷ್ಟು ಓದಿ