Dailyhunt Logo
  • Light mode
    Follow system
    Dark mode
    • Play Story
    • App Story
school reopen ಬೀಗ ಹಾಕಿದ್ದ ಸರ್ಕಾರಿ ಶಾಲೆ ಮತ್ತೆ ಶುರು

school reopen ಬೀಗ ಹಾಕಿದ್ದ ಸರ್ಕಾರಿ ಶಾಲೆ ಮತ್ತೆ ಶುರು

ಕ್ಷ್ಮೇಶ್ವರ: ಮಕ್ಕಳ ಸಂಖ್ಯೆ ಕುಸಿತದ ಕಾರಣಕ್ಕೆ ಮೂರ್ನಾಲ್ಕು ದಿನಗಳಿಂದ ಬೀಗ ಹಾಕಿದ್ದ ಪಟ್ಟಣದ ಕೆಂಚಲಾಪುರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಗಿಲು ಮಂಗಳವಾರ ಮತ್ತೆ ( school reopen) ತೆರೆದಿದೆ.
ಶಾಲೆ ಬಂದ್ ಆಗುವ ಹಂತ ತಲುಪಿರುವುದನ್ನು ಮನಗಂಡ ಶಿಕ್ಷಣ ಪ್ರೇಮಿಗಳು, ಪೋಷಕರು ಶಿಕ್ಷಣ ಇಲಾಖೆ ವಿರುದ್ಧ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಎಚ್ಚೆತ್ತ ಶಿಕ್ಷಣ ಇಲಾಖೆ ಅಧಿಕಾರಿಗಳು ಮಕ್ಕಳನ್ನು ಬೇರೆ ಶಾಲೆಗಳಿಗೆ ಕಳುಹಿಸಿದ್ದ ಪಾಲಕರ ಮನೆಗಳಿಗೆ ತೆರಳಿ ಮನವೊಲಿಸಿ, ಕೆಲ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ ಮೂರು ದಶಕಗಳಿಂದ ಬಡಾವಣೆಯ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಾಖಲಾತಿ ಸಂಖ್ಯೆ ನಿರಂತರವಾಗಿ ಕುಸಿಯುತ್ತ ಬಂದಿದೆ. ಕಳೆದ ವರ್ಷ 1ರಿಂದ 7ನೇ ತರಗತಿವರೆಗೆ ಒಟ್ಟು 26 ಮಕ್ಕಳು ದಾಖಲಾಗಿದ್ದರೆ, ಪ್ರಸ್ತುತ ಸಾಲಿನಲ್ಲಿ ಮಕ್ಕಳ 11ಕ್ಕೆ ಕುಸಿದಿತ್ತು. ಶಾಲೆಯ ಇಬ್ಬರು ಶಿಕ್ಷಕರನ್ನು ಎಸ್‌ಐಆರ್ ಕಾರ್ಯಕ್ಕೆ ನಿಯೋಜಿಸಿದ್ದರಿಂದ ಶಾಲಾ ಆರಂಭದಲ್ಲೇ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಯಿತು. ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ ಎಂಬ ಕಾರಣ ನೀಡಿ ಕೆಲ ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸಿದ್ದರು.ಶಾಲೆಯ ಸ್ಥಿತಿ ಕುರಿತು ಗಮನ ಸೆಳೆಯುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಂಗಳವಾರ ಶಾಲೆಗೆ ಭೇಟಿ ನೀಡಿದರು. ಬಳಿಕ ಮಕ್ಕಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದ ಪಾಲಕರ ಮನೆಗಳಿಗೆ ತೆರಳಿ, ಇದೇ ಶಾಲೆಯಲ್ಲಿ ಮಕ್ಕಳನ್ನು ಮುಂದುವರಿಸುವಂತೆ ಮನವಿ ಮಾಡಿದರು. ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಪರಿಣಾಮ 11 ಮಕ್ಕಳ ಪೈಕಿ ಐವರು ಮಂಗಳವಾರ ಶಾಲೆಗೆ ಹಾಜರಾಗಿದ್ದು, ಮತ್ತೆ ಎಂದಿನಂತೆ ತರಗತಿ ಆರಂಭಗೊಂಡವು.ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ, ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ಸಿಆರ್‌ಪಿಗಳಾದ ಉಮೇಶ ನೇಕಾರ, ಎನ್.ಎ. ಮುಲ್ಲಾ, ಎಸ್.ಎಚ್. ಮತ್ತೂರ, ಎಸ್‌ಡಿಎಂಸಿ ಅಧ್ಯಕ್ಷ ಸುಲೇಮಾನ್ ಮುಜಾವರ, ಹೇಮಣ್ಣ ಬುರಡಿ, ತಿಪ್ಪಣ್ಣ ರೊಟ್ಟಿಗವಾಡ, ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು. "

ಶಾಲೆ ಬಂದ್ ಮಾಡುವ ಉದ್ದೇಶ ಶಿಕ್ಷಣ ಇಲಾಖೆಗೆ ಇಲ್ಲ. ಪಾಲಕರು ಆತಂಕಪಡಬೇಕಿಲ್ಲ. ಎರಡು ದಿನಗಳಲ್ಲಿ ಒಬ್ಬ ಪರಿಣಿತ ಶಿಕ್ಷಕರನ್ನು ಶಾಲೆಗೆ ನಿಯೋಜಿಸಲಾಗುವುದು. ಇಂದಿನಿಂದ ಶಾಲೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಉಳಿದ ಮಕ್ಕಳನ್ನೂ ಮರಳಿ ಶಾಲೆಗೆ ಕರೆತರಲು ಕ್ರಮ ಕೈಗೊಳ್ಳಲಾಗುವುದು. ಪಾಲಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸಾರ್ವಜನಿಕರನ್ನು ಕರೆದು ಸಭೆ ನಡೆಸಿ, ಶಾಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆಯಲಾಗುವುದು.

ಶಿವರಾಜ ಸೀಮಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ.



Dailyhunt
Disclaimer: This content has not been generated, created or edited by Dailyhunt. Publisher: Vijayvani